Latest

ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಸಿದ್ದರಾಮಯ್ಯ

ಕಲಬುರಗಿ: ಸಿಂದಗಿ ಮತ್ತು ಹಾನಗಲ್ ಎರಡೂ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾದ್ಯಮದವರೊಂದಿಗೆ ಮಾತನಾಡಿದ ಅವರು, ನಾವು ಚುನಾವಣೆಯನ್ನು ಬಯಸಿರಲಿಲ್ಲ, ಶಾಸಕ ಮನಗೊಳಿ ಅವರ ಸಾವಿನಿಂದ ಅನಿವಾರ್ಯ ಕಾರಣಕ್ಕಾಗಿ ಚುನಾವಣೆ ನಡೆಯುತ್ತಿದೆ. ಬಿಜೆಪಿಯ ಆಡಳಿತದಿಂದ ಜನ ಭ್ರಮನಿರಸನಗೊಂಡಿದ್ದಾರೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ‌.

ಆರ್ ಎಸ್ ಎಸ್ ವಿರುದ್ಧ ಕಿಡಿ:

ಆರೆಸ್ಸೆಸ್ ಬಗ್ಗೆ ಮಾತು ಬೆಂಕಿ ಜೊತೆ ಸರಸ ಎನ್ನುವ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯನವರು, ನಾನು ಆರ್.ಎಸ್.ಎಸ್. ವಿರುದ್ದ ಮಾತನಾಡುತ್ತಿರುವುದು ಇದು ಮೊದಲಲ್ಲ. ನಾನು ಮೊದಲಿನಿಂದಲು ಆರ್ ಎಸ್ ಎಸ್ ವಿರುದ್ಧ ಮಾತನಾಡುತ್ತಲೇ ಬಂದಿದ್ದೇನೆ ಎಂದು ಗುಡುಗಿದ್ದಾರೆ.

ಕುಮಾರಸ್ವಾಮಿ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು. ಹೆಂಡದಂಗಂಡಿ ಮುಂದೆ ನಿಂತು ಸಿದ್ರಾಮಯ್ಯ ತಾಲಿಬಾನಿಗಳ ಬಗ್ಗೆ ಮಾತಾಡಿದಂತೆ ನಾನು ಮಾತಾಡಲಾರೆ ಎನ್ನುವ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಯನ್ನು ನಿರಾಕರಿಸಿದರು.

Related Articles

Leave a Reply

Your email address will not be published. Required fields are marked *

Back to top button