Latest

ಎಂಇಎಸ್​ ತನ್ನ ಅಸ್ತಿತ್ವಕ್ಕಾಗಿ ಕನ್ನಡಿಗರನ್ನು ಕೆಣಕುತ್ತಿದೆ: ಹೆಚ್ ಡಿ ಕುಮಾರಸ್ವಾಮಿ‌

ರಾಮನಗರ: ಕಳೆದ ಹಲವು ಚುನಾವಣೆಗಳಲ್ಲಿ ರಾಜಕೀಯವಾಗಿ ಮುಖಭಂಗ ಅನುಭವಿಸಿರುವ ಮಹಾರಾಷ್ಟ್ರ ಏಕೀಕರಣ ಸಮಿತಿ- ಎಂಇಎಸ್, ಈಗ ಕನ್ನಡ ರಾಜ್ಯೋತ್ಸವ ಹತ್ತಿರಕ್ಕೆ ಬಂದ ಸಂದರ್ಭದಲ್ಲೇ ಪುಂಡಾಟಿಕೆ ಶುರು ಮಾಡಿದೆ‌ ಎಂದು ಮಾಜಿ‌ ಸಿಎಂ ಹೆಚ್.ಡಿ. ಕುಮಾರಸ್ವಾಮಿ‌ ಕಿಡಿಕಾರಿದ್ದಾರೆ.

ಈ ಕುರಿತು ಟ್ವಿಟ್ ಮಾಡಿರುವ ಹೆಚ್ಡಿಕೆ, ಕನ್ನಡ ಅಸ್ಮಿತೆಯನ್ನೇ ಕೆಣಕುವ, ಕನ್ನಡಿಗರನ್ನು ಅಪಮಾನಿಸುವ ಹೇಯ ಕೆಲಸಕ್ಕೆ ಮುಂದಾಗಿದೆ ಎಂದು ಆರೋಪಿಸಿದ್ದಾರೆ‌.

ಕೆಲ ದಿನಗಳಿಂದ ಬೆಳಗಾವಿಯಲ್ಲಿ ಕನ್ನಡಿಗರನ್ನು ಎಂಇಎಸ್ ವಿನಾಕಾರಣ ಕೆಣಕುತ್ತಿದೆ. ಪ್ರತಿಭಟನೆಯ ವೇಳೆ ಕರ್ನಾಟಕ ಸರಕಾರವನ್ನು ಎಂಇಎಸ್ ಪುಂಡರು ಗೇಲಿ ಮಾಡಿದ್ದಾರೆ. ಅಲ್ಲಿನ ಸರಕಾರಿ ಕಚೇರಿಗಳಲ್ಲಿ ದಾಖಲೆಗಳನ್ನು ಮರಾಠಿ ಭಾಷೆಯಲ್ಲೇ ಕೊಡಬೇಕು ಎಂದು ಒತ್ತಾಯಿಸುವ ಭರದಲ್ಲಿ ಕರ್ನಾಟಕ ಸರಕಾರವನ್ನು ʼನಾಲಾಯಕ್ʼ ಎಂದು ಕರೆದು ʼಜೈ ಮಹಾರಾಷ್ಟ್ರʼ ಎಂದು ಘೋಷಣೆ ಕೂಗಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯವಾಗಿ ಮೂಲೆಗುಂಪಾಗಿರುವ ಎಂಇಎಸ್, ತಮ್ಮ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಗೊಂದಲ, ಗದ್ದಲ ಉಂಟು ಮಾಡುತ್ತಿದೆ. ಭಾಷಾ ಭ್ರಾತೃತ್ವ, ಸ್ನೇಹಶೀಲತೆ ಹಾಗೂ ಶಾಂತಿ ಸಹನೆಗೆ ಹೆಸರಾಗಿರುವ ಕುಂದಾ ನಗರಿಯ ಪ್ರತಿಷ್ಠೆಯನ್ನು ಹಾಳು ಮಾಡುವ ದುರುದ್ದೇಶ ಇವರದ್ದಾಗಿದೆ. ನಾಡು ನುಡಿಯ ವಿಷಯದಲ್ಲಿ ರಾಜ್ಯ ಸರಕಾರ ಅಲಕ್ಷ್ಯ ಮಾಡಲೇಬಾರದು. ಕನ್ನಡವನ್ನು ಅಪಮಾನಿಸುವ ಈ ಪುಂಡರಿಗೆ ತಕ್ಕ ಶಾಸ್ತಿ ಮಾಡಬೇಕು ಎಂದು ನಾನು ಸರಕಾರವನ್ನು ಒತ್ತಾಯಿಸಿದ್ದಾರೆ.

Related Articles

Leave a Reply

Your email address will not be published.

Back to top button