Latest

ಯಡಿಯೂರಪ್ಪ ಆಪ್ತರ ಮೇಲಿನ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ: ಹೆಚ್ ಡಿ ಕುಮಾರಸ್ವಾಮಿ

ಮೈಸೂರು : ಮಾಜಿ ಸಿಎಂ ಬಿಎಸ್ ವೈ ಆಪ್ತರ ಮೇಲೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ್ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ ಹೆಚ್,ಡಿಕೆ ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣರಾಗಿದ್ದು, ಯಡಿಯೂರಪ್ಪರನ್ನ ಭೇಟಿ ಮಾಡಿದ್ದೂ ಅದರ ಭಾಗವಾಗಿದೆ. ಈ ಭೇಟಿ ಬಗ್ಗೆ ಬಿಜೆಪಿಯ ಕೇಂದ್ರದವರಿಗೂ ಮಾಹಿತಿ ಇದೆ ಎಂದರು.

ಸಿದ್ದರಾಮಯ್ಯನವರಿಗೆ ಬೇಕಿರುವುದು ಪವರ್ ಮಾತ್ರ. ಅದಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಪುಟಗೋಸಿ ವಿರೋಧ ಪಕ್ಷದ ನಾಯಕ‌ ಸ್ಥಾನಕ್ಕಾಗಿ ಮೈತ್ರಿ ಸರ್ಕಾರವನ್ನು ಕೆಡವಿರುವ ಸಿದ್ದರಾಮಯ್ಯ ಕುತಂತ್ರಿ ರಾಜಕಾರಣಿ ಎಂದು ವಾಗ್ದಾಳಿ ನಡೆಸಿದರು.

ಸಿಂಧಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹಲವಾರು ನೀರಾವರಿ ಯೋಜನೆಗೆ ಚಾಲನೆ 2006ರಲ್ಲಿ ನೀಡಿದ್ದೆವು. ಸಿಂದಗಿಯಲ್ಲಿ ಜೆಡಿಎಸ್, ಬಿಜೆಪಿ ನಡುವೆ ಸ್ಪರ್ಧೆ ಇದ್ದು, ಗೆಲ್ಲುವ ಅವಕಾಶವಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ 23 ಸಚಿವರ ಹೊಟ್ಟೆ ಮೇಲೆ ಹೊಡೆದರು. ‌ಮೈತ್ರಿ ಸರ್ಕಾರ ಪತನವಾಗಲು ಕಾರಣವೇ ಅವರು. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಸಹಕಾರ ಕೊಟ್ಟವರು ಯಾರು? ಎಂಬುದು ಗೊತ್ತಿದೆ. ಐಟಿ ದಾಳಿ ಹಿಂದೆ ಸಿದ್ದರಾಮಯ್ಯ ಕುತಂತ್ರವಿದೆ. ಸಿದ್ದರಾಮಯ್ಯ ಅವರಿಗೆ ಬೇಕಿರುವುದು ಪವರ್ ಮಾತ್ರ. ಪವರ್‌ಗಾಗಿ ಏನು ಬೇಕಾದರೂ ಮಾಡುತ್ತಾರೆ. ಇವರು‌ ಜೆಡಿಎಸ್ ಬಗ್ಗೆ ಮಾತನಾಡಲು ಯಾರು ಎಂದು ಹೆಚ್‌ಡಿಕೆ ಪ್ರಶ್ನಿಸಿದರು.

ಸಿದ್ದರಾಮಯ್ಯ ಜೊತೆ ಯಡಿಯೂರಪ್ಪ ಗುಪ್ತವಾಗಿ ಮಾತನಾಡಿರುವ ಬಗ್ಗೆ ಬಿಜೆಪಿ ಹೈಕಮಾಂಡ್‌ಗೆ ಮಾಹಿತಿ ಸಿಕ್ಕಿದೆ. ಆದ್ದರಿಂದಲೇ ಬಿಎಸ್‌ವೈ ಆಪ್ತರ ಮೇಲೆ ಐಟಿ ದಾಳಿ ಆಗಿದೆ. ಐಟಿ ಅವರಿಗೆ ಯಡಿಯೂರಪ್ಪ ಅಕ್ರಮಗಳ ಬಗ್ಗೆ ಮೊದಲೇ ಗೊತ್ತಿರಲಿಲ್ಲವೇ, ಆದರೆ ಈಗ ಗುಪ್ತ ಮಾತುಕತೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರನ್ನು ಟೈಟ್ ಮಾಡಲು ಐಟಿ ರೈಡ್ ಮಾಡಲಾಗಿದೆ. ಸಿದ್ದರಾಮಯ್ಯ, ಸೋನಿಯಾ ಗಾಂಧಿ ಭೇಟಿಯಾಗಿರುವುದು ಯಡಿಯೂರಪ್ಪ ಜೊತೆಗಿನ ಮಾಹಿತಿಯನ್ನು ಸೋನಿಯಾ ಗಾಂಧಿ ಅವರಿಗೆ ನೀಡಲು ಇರಬಹುದು ಎಂದು ಹೇಳಿದರು.

ಸಿದ್ದರಾಮಯ್ಯ ಅವರಿಗೆ ಕುಮಾರಸ್ವಾಮಿ ಬಗ್ಗೆ ಮಾತನಾಡದಿದ್ದರೆ ನಿದ್ದೆ ಬರುವುದಿಲ್ಲ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಸೋಲಿಸಿದ್ದು, ಸಿದ್ದರಾಮಯ್ಯ ಎಂದು ನಾನು ಹೇಳಿಲ್ಲ. ಈ ಬಗ್ಗೆ ಸಿದ್ದರಾಮಯ್ಯ ಬೆನ್ನು ತಟ್ಟಿಕೊಳ್ಳುವುದು ಬೇಡ. ಅಲ್ಲಿ ಕಾಂಗ್ರೆಸ್, ಬಿಜೆಪಿ, ರೈತಸಂಘ ಎಲ್ಲರೂ ಸೇರಿ ಕೌರವರ ರೀತಿಯಲ್ಲಿ ಚಕ್ರವ್ಯೂಹ ರಚಿಸಿ ಕುತಂತ್ರ ಮಾಡಿದ್ದಾರೆ. ‌ಇದರಲ್ಲಿ ಸಿದ್ದರಾಮಯ್ಯ ಪಾತ್ರ ಏನು ಇಲ್ಲ. ಸೋಲಿಸುವ ಶಕ್ತಿ ಸಿದ್ದರಾಮಯ್ಯ ಅವರಿಗೆ ಇದ್ದಿದ್ದರೆ ಏಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುತ್ತಿದ್ದರು ಎಂದು ಮಾತಿನುದ್ದಕ್ಕೂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

Related Articles

Leave a Reply

Your email address will not be published.

Back to top button