Latest
Mysuru Dasara 2021: ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ.ಕೃಷ್ಣ
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2021ಕ್ಕೆ ಇಂದು ವಿದ್ಯುಕ್ತ ಚಾಲನೆ ನೀಡಲಾಯಿತು. ಮೈಸೂರಿನ ಅಧಿದೇವತೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಬಳಿಕ ಮಾಜಿ ಸಿಎಂ ಎಸ್.ಎಂ. ಕೃಷ್ಣ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮೂಲಕ ಚಾಲನೆ ನೀಡಿದರು.
ಇಂದು ಬೆಳಿಗ್ಗೆ 8.26ಕ್ಕೆ ಪುಷ್ಪಾರ್ಚನೆ ನೆರವೇರಿಸುವ ಮೂಲಕ 411ನೇ ದಸರಾ ಉತ್ಸವಕ್ಕೆ ಚಾಲನೆ ನೀಡಲಾಯಿತು. ಪ್ರತೀ ಬಾರಿಯೂ ಸಾಹಿತಿಗಳು ದಸರಾ ಉದ್ಘಾಟನೆ ನೆರವೇರಿಸುತ್ತಿದ್ದರು. ಆದ್ರೆ ಈ ಬಾರಿ ರಾಜಕಾರಣಿಯೊಬ್ಬರು ದಸರಾ ಉದ್ಘಾಟಿಸುವ ಮೂಲಕ ಹೊಸ ಪರಂಪರೆ ಆರಂಭಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ವಿ.ಸುನಿಲ್ ಕುಮಾರ್, ಸೇರಿದಂತೆ ಹಲವು ಸಚಿವರು ಶಾಸಕರು, ಮೈಸೂರು ಭಾಗದ ಜನಪ್ರತಿನಿಧಿಗಳು ಮತ್ತು ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.