Latest

ಉಪಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿ ಗೆಲುವು ಸಾಧಿಸಿದ್ದಾರೆ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ

ನವದೆಹಲಿ: ಉಪ ಚುನಾವಣೆ ಫಲಿತಾಂಶದಿಂದ ನಾವು ಧೃತಿಗೆಟ್ಟಿಲ್ಲ. ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಹೆಚ್ಚು ಹಣ ಖರ್ಚು ಮಾಡಿದ್ದಾರೆ ಎಂದು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಗಿಂತ ಬಿಜೆಪಿಯವರು ಹೆಚ್ಚು ಹಣ ಖರ್ಚು ಮಾಡಿದ್ದಾರೆ. ಒಟ್ಟಿಗೆ 10 ಸಾವಿರ ಕೊಟ್ಟಿದ್ದಾರೆ ಅಂತಾ ಚರ್ಚೆ ಇದೆ. ಕಾಂಗ್ರೆಸ್ ನವರು ಚೆನ್ನಾಗಿ ಖರ್ಚು ಮಾಡಿದ್ದಾರೆ ಅಂತ ಹೇಳ್ತಾರೆ ನಮ್ಮವರು ಎಷ್ಟು ತಗೊಂಡಿದ್ದಾರೆ ಎಂದು ನಾನು ಕೇಳಿಲ್ಲ ಮೂರನೆ ಸ್ಥಾನಕ್ಕೆ ಹೋಗಿದ್ದಾರೆ ಅನ್ನಿಸುತ್ತೆ ಎಂದರು.

ಈ ಬಾರಿಯ ಉಪಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿ ಆಯ್ಕೆ ಮಾಡಿದ್ದೆವು ಸಿಂದಗಿಯಲ್ಲಿ ಅಂಗಡಿ ಪ್ಯಾಮಿಲಿಗೆ ಒಳ್ಳೆಯ ಹೆಸರಿದೆ ಅಲ್ಲಿ ಹಿಂದೂ ಮುಸ್ಲಿಂ ಎಂಬ ಭೇದ ಇಲ್ಲ . ಹಾಗಾಗಿ ನಾವು ಅಂಗಡಿ ಫ್ಯಾಮಿಲಿಗೆ ಟಿಕೆಟ್ ಕೊಟ್ಟೆವು. ಅಲ್ಲಿ ಕಾಂಗ್ರೆಸ್ ನವರು ಚೆನ್ನಾಗಿ ಕೆಲಸ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಹೆಚ್ಚು ಖರ್ಚು ಮಾಡಿದ್ದಾರೆ. ಆದರೆ ಸಾರ್ವರ್ತಿಕ ಚುನಾವಣೆಯಲ್ಲಿ ಇಷ್ಟು ಹಣ ಸುರಿಯೋಕೆ‌ ಆಗಲ್ಲ ಎಂದು ಹೇಳಿದರು.

ಇದುವರೆಗೂ ನಾನು ಉಪ ಚುನಾವಣೆ ಪ್ರಚಾರ ಮಾಡಿರಲಿಲ್ಲ ಆದರೆ ಸಿಂದಗಿ ಉಪಚುನಾವಣೆ ಹೋಗಿದ್ದೆ ಸಿಂದಗಿ ಜನರು ಕಷ್ಟದಲ್ಲಿದ್ದರು, ಕೂಲಿಗೆ ಮಹಾರಾಷ್ಟ್ರಕ್ಕೆ ಗುಳೆ ಹೋಗುತ್ತಿದ್ದರು ಆ ಭಾಗದ ಜನರಿಗೆ ಏನ್ ಮಾಡಿದ್ದೇನೆ ಅನ್ನೊದನ್ನು ಜನರೇ ಹೇಳುತ್ತಾರೆ. ಮನಗೊಳಿಯವರು ಸಮಾಜವಾದಿ ಜನತಾ ಪಾರ್ಟಿಯಿಂದ ನಿಂತು ಸೋತರು ಮತ್ತೆ ನಮ್ಮ ಪಕ್ಷಕ್ಕೆ ಬಂದು ಗೆದ್ದರು ಅವರನ್ನು 2 ಬಾರಿ ಮಂತ್ರಿ ಕೂಡ ಮಾಡಿದ್ದೆವು ಎಂದು ಹೇಳಿದರು.

ನಾನ್ಯಾಕೆ ಸಿಂದಗಿ ಪ್ರಚಾರಕ್ಕೆ ಹೋದೆ ಅಂದ್ರೆ ಸಿಂದಗಿಯಲ್ಲಿ ಹಸಿರು ತುಂಬಿದೆ, ಅಭಿವೃದ್ಧಿಯಾಗಿದೆ. ಇದಕ್ಕೆ‌ ಯಾರು ಕಾರಣ ? ಎಂದು ಪ್ರಶ್ನಿಸಿದ ದೇವೇಗೌಡ, ಈ ಉಪಚುನಾವಣೆ ಫಲಿತಾಂಶದಿಂದ ದೃತಿಗೆಟ್ಟಿಲ್ಲ ಇನ್ನು ಒಂದೂವರೆ ವರ್ಷ ಹೋರಾಡುತ್ತೇನೆ ವಿಜಾಪುರ, ಬಾಗಲಕೋಟೆ ಪ್ರದೇಶದಲ್ಲಿ 20 ಸಕ್ಕರೆ ಕಾರ್ಖಾನೆ ಕೊಟ್ಟಿದ್ದೇನೆ ಎಂದರು.

ಅಭ್ಯರ್ಥಿಗಳ ಆಯ್ಕೆ, ಟಿಕೆಟ್ ಹಂಚಿಕೆ ನನ್ನದೇ:

ಮುಂದಿನ ಚುನಾವಣೆಗೆ ನಾನು ಪ್ರವಾಸ ಮಾಡುತ್ತೇನೆ ಇದೇ ಭಾಗದಲ್ಲಿ ಹೆಚ್ಚು ಪ್ರವಾಸ ಮಾಡುತ್ತೇನೆ ಒಂದು ತಿಂಗಳಲ್ಲಿ ಎರಡು ಜಿಲ್ಲೆಗೆ ಭೇಟಿ ನೀಡುತ್ತೇನೆ ಬಳಿಕ ನಾನೇ ಅಭ್ಯರ್ಥಿ ಆಯ್ಕೆ ಮಾಡುತ್ತೇನೆ
ದಕ್ಷಿಣದಲ್ಲಿ ಕುಮಾರಸ್ವಾಮಿ ನೋಡಿಕೊಳ್ತಾರೆ ಪಕ್ಷದ ಎಲ್ಲ ಮುಖಂಡರ ಜೊತೆ ಸೇರಿ ಒಟ್ಟಾಗಿ ಹೋರಾಡುತ್ತೇವೆ ದೃತಿಗೆಡುವುದಿಲ್ಲ ಎಂದು ಹೇಳಿದರು.

ನಮ್ಮ ಪಕ್ಷದ ಅಭ್ಯರ್ಥಿ ತೆಗೆದುಕೊಂಡು ಹೋಗಿ ಕಾಂಗ್ರೆಸ್ ಪಡೆದ ಮತ ಎಷ್ಟು..? ಹಾನಗಲ್ ಬಗ್ಗೆ ನಾನು ಮಾತನಾಡುವುದಿಲ್ಲ.. ಬರೀ ಕಾಂಗ್ರೆಸ್ , ಬಿಜೆಪಿ ಆದ್ರೆ ನಾವೇನು ಮನೆಗೆ ಹೋಗಬೇಕಾ..?
ದೇವೆಗೌಡ ಇನ್ನು ಜೀವಂತ ಬದುಕಿದ್ದಾನೆ 89 ವರ್ಷ ಆಗಿದ್ರು ಹೋರಾಟ ಮಾಡುತ್ತೇನೆ.

ನಮ್ಮ ಪಕ್ಷದಲ್ಲಿ ನಾಯಕರಿದ್ದಾರೆ, ಹೋರಾಡುತ್ತೇವೆ. ನಾನು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಸೋತ ಮೇಲೆ ಗುಬ್ಬಿ ಶ್ರೀನಿವಾಸ್ ನೇತೃತ್ವದಲ್ಲೇ ಜಿಲ್ಲಾ ಪ್ರವಾಸ ಮಾಡೋಣ ಎಂದಿದ್ದೆ
ಮಂತ್ರಿ ಆಗಿದ್ದಾಗಲೇ ಕೇಳಿದ್ದೆ ಜನರಿಗೆ ಧನ್ಯವಾದ ಹೇಳಲು ಮುಂದಾಗಿದ್ದೆ ಆದರೆ ಏನಾಯಿತು ಅಲ್ಲಿನ ಜನತೆ ಅರ್ಥ ಮಾಡಿಕೊಳ್ಳುತ್ತಾರೆ ಎಂದು ದೇವೇಗೌಡ ಹೇಳಿದರು.

ಗುಬ್ಬಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ. ಅವರು ಅಭ್ಯರ್ಥಿ ಘೋಷಣೆ ಮಾಡಿದ್ರೆ ನಾವು ಸುಮ್ಮನೆ ಕೂರಬೇಕಾ..? ನಾವು ಆಲ್ಟರ್ನೇಟಿವ್ ಹುಡುಕಬೇಕಾಗುತ್ತೆ ಎಂದು ಪಕ್ಷದ ನಿಲುವನ್ನು ಸಮರ್ಥಿಸಿದರು.

ಜಿ.ಟಿ ದೇವೇಗೌಡ ಪಕ್ಷ ಬಿಟ್ಟಿದ್ದೇನೆ ಎಂದು ಹೇಳಿದ್ದಾರಲ್ಲಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ದೇವೇಗೌಡ, ಮಕ್ಕಳು ಕೂತು ಮಾತನಾಡಿದ್ದಾರೆ. ಜಿಟಿಡಿ ಮಗ ಮತ್ತು ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ ಮುಂದೆ ಏನಾಗುತ್ತೆ ನೋಡೋಣ ಎಂದರು.

Related Articles

Leave a Reply

Your email address will not be published. Required fields are marked *

Back to top button