Latest

Amarinder Singh: ಪಂಜಾಬ್​​​​​ ಮಾಜಿ ಸಿಎಂ ಅಮರೀಂದರ್ ಸಿಂಗ್ ಶೀಘ್ರದಲ್ಲೇ ಹೊಸ ಪಕ್ಷ ಘೋಷಣೆ

ನವದೆಹಲಿ: ಕಾಂಗ್ರೆಸ್‌ನಿಂದ ಹೊರನಡೆದಿರುವ ಪಂಚಾಬ್​​​​​​​​ ರಾಜ್ಯದ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಇದೀಗ ಹೊಸ ರಾಜಕೀಯ ಪಕ್ಷ ಘೋಷಿಸುವ ಸೂಚನೆ ನೀಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಮರೀಂದರ್‌ ಸಿಂಗ್‌, ಪಂಜಾಬ್​ನ ಉತ್ತಮ ಭವಿಷ್ಯಕ್ಕಾಗಿ ನಮ್ಮ ಹೋರಾಟ ಇನ್ನೂ ಮುಗಿದಿಲ್ಲ. ನನ್ನ ಹೊಸ ರಾಜಕೀಯ ಪಕ್ಷವನ್ನು ಶೀಘ್ರ ಘೋಷಿಸುತ್ತೇನೆ. ಪಂಜಾಬ್ ರಾಜ್ಯ ಮತ್ತು ಅದರ ಜನರ ಹಿತಾಸಕ್ತಿಯನ್ನು ಕಾಪಾಡುತ್ತೇನೆ. ಕಳೆದ ಒಂದು ವರ್ಷಗಳಿಂದ ಹೋರಾಡುತ್ತಿರುವ ರೈತರ ಪರವಾಗಿ ನಿಲ್ಲುತ್ತೇನೆ ಎಂದು ಘೋಷಿಸಿದ್ದಾರೆ.

2022ರ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಸ್ಥಾನ ಹೊಂದಾಣಿಕೆ ಬಗ್ಗೆ ನಿರೀಕ್ಷೆ ಇರಿಸಿಕೊಂಡಿದ್ದೇನೆ. ರೈತರ ಹಿತಾಸಕ್ತಿಗೆ ಪೂರಕವಾಗಿ ರೈತ ಚಳವಳಿಯ ಆಶಯಗಳು ಈಡೇರಿದರೆ ಮಾತ್ರ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವೆ ಎಂದು ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button