Latest

Randeep Surjewala: ಬಿಜೆಪಿ ಸರ್ಕಾರ ಬೆಲೆ ಏರಿಕೆ ಮಾಡಿ ದೇಶದ ಜನರನ್ನು ಲೂಟಿ ಮಾಡುತ್ತಿದೆ: ಸುರ್ಜೇವಾಲಾ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಸರ್ಕಾರ ಬೆಲೆ ಏರಿಕೆಯಿಂದ ಜನರನ್ನ ಲೂಟಿ ಮಾಡ್ತಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ವಿಮಾನ ನಿಲ್ದಾಣದಲ್ಲಿ‌ ಮಾತನಾಡಿದ ಅವರು, ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಕಾಲಿನಿಂದ ತಲೆ ವರೆಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ ಬೆಲೆ ಏರಿಕೆ ಮೂಲಕ ಜನರನ್ನ ಕೊಳ್ಳೆ ಹೊಡೆಯುತ್ತಿದೆ. ತೈಲ ಬೆಲೆ, ಅನಿಲ ಬೆಲೆ, ಅಗತ್ಯ ವಸ್ತುಗಳ ಬೆಲೆ ನೋಡಿದ್ರೆ ಇವರ ಲೂಟಿ ಬಗ್ಗೆ ಸ್ಪಷ್ಟವಾಗಿ ಗೊತ್ತಾಗುತ್ತದೆ. ಸದ್ಯ ವಿದೇಶದ ತೊಗರಿ ಬೇಳೆ ದೇಶಕ್ಕೆ ಬರಲಿದೆ. ನಮ್ಮ ದೇಶದ ರೈತರ ಬೇಳೆ ಮಾರಾಟ ಆಗದು ರೈತರು ಮತ್ತೆ ಸಕಷ್ಟಕ್ಕೆ ಸಿಲುಕಲಿದ್ದಾರೆ ಎಂದರು.

ಇನ್ನು ಮೋದಿ ಯಾವ ರಾಜ್ಯದಲ್ಲೂ ದಲಿತ ಮುಖ್ಯಮಂತ್ರಿ ಮಾಡಿಲ್ಲ. ನಾವು ಪಂಜಾಬ್‌ ದಲ್ಲಿ ದಲಿತ ಮುಖ್ಯಮಂತ್ರಿ ಮಾಡಿದ್ದೇವೆ. ಎಲ್ಲಾ ಸಮುದಾಯಕ್ಕೂ ಪ್ರಾತಿನಿಧ್ಯ ಕೊಡುತ್ತಿದ್ದೇವೆ. ಮೋದಿ ಆಢಳಿತದಿಂದ ದೇಶದ ಜನ ಬದಲಾವಣೆ ಬಯಸುತ್ತಿದ್ದಾರೆ. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬದಲಾವಣೆ ಖಚಿತ ಎಂದು ಸುರ್ಜೇವಾಲಾ ಹೇಳಿದರು.

ಇದೆ ವೇಳೆ ರಾಜ್ಯ ಕಾಂಗ್ರೆಸ್ ನಾಯಕರಿ ಸೋನಿಯಾ ಗಾಂಧಿಗೆ ಪತ್ರ ಬರೆದ ವಿಚಾರವಾಗಿ ಮಾತನಾಡಿದ ಸುರ್ಜೇವಾಲಾ, ಕಾಂಗ್ರೆಸ್ ಒಂದು ಕುಟುಂಬ, ಕುಟುಂಬದ ಮುಖ್ಯಸ್ಥರಿಗೆ ಪತ್ರ ಬರೆಯಲು ಮೂಕ್ತ ಅವಕಾಶ ಇದೆ. ಪಕ್ಷದ ಯಾರೇ ಕಾರ್ಯಕರ್ತರು ಸೋನಿಯಾ ಗಾಂಧಿಗೆ ಪತ್ರ ಬರೆಯಬಹುದು. ತಮ್ಮ ಅಭಿಪ್ರಾಯ ಸೋನಿಯಾ ಗಾಂಧಿಗೆ ತಿಳಿಸೋದ್ರಲ್ಲಿ ತಪ್ಪೆನಿಲ್ಲ ಎಂದು ಪ್ರತಿಪಾದಿಸಿದರು.

Related Articles

Leave a Reply

Your email address will not be published.

Back to top button