Latest

ಕಾರವಾರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ

ಕಾರವಾರ : ಕಾರವಾರ ತಾಲೂಕಿನ ಐತಿಹಾಸಿಕ ಛತ್ರಪತಿ ಶಿವಾಜಿ ಕಾಲದ ದುರ್ಗಾದೇವಿ ದೇವಾಲಯಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ ಸೋಮವಾರ ವಿಶೇಷ ಪೂಜೆ ಸಲ್ಲಿಸಿದರು.

ನವರಾತ್ರಿ ಹಿನ್ನೆಲೆಯಲ್ಲಿ ತಾಲೂಕಿನ ಸದಾಶಿವಗಡದಲ್ಲಿರುವ ದುರ್ಗಾದೇವಿ ದೇವಾಲಯಕ್ಕೆ ಆಗಮಿಸಿದ ಅವರು ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಅವರೊಂದಿಗೆ ಕಾರವಾರ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಕೂಡ ಭಾಗಿಯಾಗಿ ಪೂಜೆ ಸಲ್ಲಿಸಿದರು.

ಪೂಜೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ದುರ್ಗಾದೇವಿ‌ ದೇವಾಲಯಕ್ಕೆ ಬರುವ ಇಚ್ಛೆ ಇತ್ತು.ಅಲ್ಲದೆ ನವರಾತ್ರಿ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಹಲವು ಭಕ್ತರು ಆಗಮಿಸುವಂತೆ ಆಹ್ವಾನ ನೀಡಿದ್ದರು.ಅದರಂತೆ ಇಂದು ಬಂದು ಪೂಜೆ ಸಲ್ಲಿಸಿದ್ದೇನೆ ಎಂದರು.

ಗೋವಾ ರಾಜ್ಯದ ಪ್ರವಾಸೋದ್ಯಮ ನವೆಂಬರ್​​ನಿಂದ ಮುಕ್ತವಾಗಲಿದೆ. ಈಗಾಗಲೇ ಮೊದಲ ಡೋಸ್ ಲಸಿಕಾಕರಣ ವೇಗವಾಗಿ ಮುಗಿಸಿದ್ದೇವೆ. ಎರಡನೇ ಡೋಸ್ ಮುಂದಿನ ಒಂದು ತಿಂಗಳಲ್ಲಿ ಮುಗಿಸುತ್ತೇವೆ. ಸದ್ಯದಲ್ಲಿಯೇ ಅಂತರ್ ರಾಜ್ಯ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸುವುದಾಗಿ ಅವರು ಹೇಳಿದರು.

Related Articles

Leave a Reply

Your email address will not be published. Required fields are marked *

Back to top button