Latest
Karnataka Rain: ಹಿಂಗಾರು ಅಬ್ಬರ: ಅ.25ರವರೆಗೆ ಭಾರೀ ಮಳೆ
ಬೆಂಗಳೂರು: ಹಿಂಗಾರು ಮಳೆ ಜೋರಾಗಿ ಸುರಿಯತೊಡಗಿದ್ದು, ರಾಜ್ಯದಲ್ಲಿ ಅ.25 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಹಾಸನ, ಕೊಡಗು, ರಾಮನಗರ, ಕೋಲಾರ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಬೆಂಗಳೂರಿನಲ್ಲಿ ಮಳೆ ತುಸು ಕಡಿಮೆಯಾಗಿದ್ದರೂ, ಮುಂದಿನ ದಿನಗಳಲ್ಲಿ ಅಬ್ಬರ ಮತ್ತೆ ಹೆಚ್ಚಾಗಲಿದೆ. ಈ ಹಿನ್ನೆಲೆಯಲ್ಲಿ ಅ.21, 22 ಮತ್ತು 24 ರಂದು ರಾಜಧಾನಿಗೆ ಹವಾಮಾನ ಇಲಾಖೆಯು ಯೆಲ್ಲೊಅಲರ್ಟ್ ನೀಡಿದೆ.