Latest

ಸಿಬಿಐ ದಾಖಲಿಸಿದ ಪ್ರಕರಣ ರದ್ದಿಗೆ ಮನವಿ : ವಿನಯ ಕುಲಕರ್ಣಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತಿ ಸದಸ್ಯ ಸೇರಿದಂತೆ ಬಿಜೆಪಿ ಮುಖಂಡರಾಗಿದ್ದ ಯೋಗೇಶಗೌಡ ಗೌಡರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ದಾಖಲು ಮಾಡಿದ್ದ ಪ್ರಕರಣ ರದ್ದು ಕೋರಿ ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಮಾಜಿ ಸಚಿವ ವಿನಯ ಕುಲಕರ್ಣಿಯವರ ಮೇಲೆ ಸಿಬಿಐ ಪ್ರಕರಣ ದಾಖಲು ಮಾಡಿ ಕಳೆದ ನವೆಂಬರ್ 5ರಂದು ಬಂಧನ ಮಾಡಿತ್ತು. ತದನಂತರ ಪ್ರಕರಣದಲ್ಲಿ ಜಾಮೀನು ಪಡೆದು ವಿನಯ ಕುಲಕರ್ಣಿ ಹೊರ ಬಂದಿದ್ದಾರೆ. ಸಿಬಿಐ ದಾಖಲು ಮಾಡಿದ್ದ ಪ್ರಕರಣವನ್ನು ರದ್ದು ಮಾಡುವಂತೆ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಹೈಕೋರ್ಟ್ ದ್ವಿಸದಸ್ಯ ಪೀಠದಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕೆಂದು ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಹೈಕೋರ್ಟ್ ದ್ವಿಸದಸ್ಯ ಪೀಠ ಸಿಬಿಐ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೋರಡಿಸಿದೆ. ಇದರಿಂದಾಗಿ ಈಗ ಮಾಜಿ ಸಚಿವ ವಿನಯ ಕುಲಕರ್ಣಿಯವರಿಗೆ ನಿರಾಸೆ ಮೂಡಿದಂತಾಗಿದೆ.

Related Articles

Leave a Reply

Your email address will not be published.

Back to top button