Latest

ಪಂಚಮಸಾಲಿಗಳಿಗೆ ಮೀಸಲಾತಿ ಕಲ್ಪಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಬೆಂಗಳೂರು: ಇದೇ ಅ.30ರ ಒಳಗೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮೀಸಲಾತಿ ನೀಡುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮೀಸಲಾತಿ ಪುನರ್ ಪರಿಷ್ಕರಣೆಗೆ ಸಮಿತಿ ರಚಿಸಿದ್ದರು. ಹಾಗೆಯೇ ಮೂರು ತಿಂಗಳೊಳಗೆ ವರದಿ ಪಡೆದು ಮೀಸಲಾತಿ ಒದಗಿಸುವ ಭರವಸೆ ಕೊಟ್ಟಿದ್ದರು. ಕೂಡಲೇ ವರದಿ ಪಡೆದು ಮೀಸಲಾತಿ ಒದಗಿಸಬೇಕು ಎಂದು ಆಗ್ರಹಿಸಿದರು.

ಉಪಚುನಾವಣೆಗೂ ಮೀಸಲಾತಿಗೂ ಯಾವುದೇ ಸಂಬಂಧ ಇರುವುದಿಲ್ಲ. ಜನರು ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಾಗ ಮಾತ್ರ ಸರ್ಕಾರದ ಕೆಲಸವಾಗಲು ಸಾಧ್ಯ, ಚುನಾವಣೆ ಮುಗಿಯುವವರೆಗೆ ನಾವು ಕಾಯುತ್ತೇವೆ. ರಾಜಕಾರಣ ಮಾಡಲ್ಲ ಎಂದರು.

ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಅ.23ರಂದು ನಡೆಯಲಿದ್ದು, 2ಎ ಮೀಸಲಾತಿಗಾಗಿ ಆಗ್ರಹಪಡಿಸಿ ಆಚರಿಸಲು ತೀರ್ಮಾನಿಸಲಾಗಿದೆ. ಅಲ್ಲದೆ, ಗ್ರಾಮೀಣ ಭಾಗದಲ್ಲಿ ಗ್ರಾಮ ಪ್ರತಿಜ್ಞೆ ಎಂಬ ಚಳವಳಿ ನಡೆಸುವ ಮೂಲಕ ಸಮುದಾಯವನ್ನು ಜಾಗೃತಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕಾರಣ ಅವರ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ. ಇದಕ್ಕೆ ಯತ್ನಾಳ್ ಅವರೇ ಉತ್ತರ ಕೊಟ್ಟಿದ್ದಾರೆ. ಈ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸುವುದಿಲ್ಲ ಎಂದರು.

Related Articles

Leave a Reply

Your email address will not be published.

Back to top button