Latest

ಅನಾಚಾರ ಎಂಬುದು ಬಿಜೆಪಿಯ ನಿತ್ಯದ ದಿನಚರಿ : ಜೆಡಿಎಸ್

ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಾ ಸಂಘ (ಆರ್.ಎಸ್.ಎಸ್) ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಎತ್ತಿದ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಸತ್ಯವನ್ನು ಮರೆ ಮಾಚುವ ಹುನ್ನಾರದೊಂದಿಗೆ ಬಿಜೆಪಿ ದಾಸರ ಪದಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಜೆಡಿಎಸ್ ಆರೋಪಿಸಿದೆ.

ಈ ಸಂಬಂಧ ಸರಣಿ ಟ್ವಿಟ್ ಮಾಡಿರುವ ಜೆಡಿಎಸ್ ಸಮಾಜದ ಉದ್ಧಾರಕ್ಕಾಗಿ ದಾಸಶ್ರೇಷ್ಠರು ಬರೆದ ಕೃತಿಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಹೀನ ಕೆಲಸವನ್ನು ಬಿಜೆಪಿ ಮಾಡುತ್ತಿದೆ. “ಆಚಾರವಿಲ್ಲದ ನಾಲಿಗೆ, ನಿನ್ನ ನೀಚ ಬುದ್ಧಿಯ ಬಿಡು ನಾಲಿಗೆ” ಎನ್ನುವುದು ಬಿಜೆಪಿಯ ಎಲುಬಿಲ್ಲದ ನಾಲಿಗೆಯ ಸಂಸ್ಕಾರವನ್ನು ಸಾರುತ್ತಿದೆ. ಹೇಳುವುದು ಆಚಾರ, ಮಾಡುವುದು ಅನಾಚಾರ. ಜನರಿಗೆ ಗೊತ್ತಿದೆ ನಿಮ್ಮ ಸದಾನಂದ ಪರಿವಾರ. ರಾಜ್ಯದಲ್ಲಿ ಭ್ರಷ್ಟಾಚಾರ ಎಸಗಿ ಜೈಲಿಗೆ ಹೋಗಿ ಇತಿಹಾಸ ಸೃಷ್ಟಿಸಿದೆ. ಮುಖ್ಯಮಂತ್ರಿ ಯಾವ ಪಕ್ಷದವರು? ಅವರ ಹಿಂದೆಯೇ ಹಿಂಡು ಹಿಂಡಾಗಿ ಜೈಲು ಕಂಬಿ ಎಣಿಸಿದ ಸಚಿವ ಶಿಖಾಮಣಿಗಳು ಯಾವ ಪಕ್ಷದವರು ಎಂದು ಜೆಡಿಎಸ್ ಟೀಕಿಸಿದೆ.

ಸಂಘ ಸಂಸ್ಕಾರ ಪಡೆದು ಸದನದಲ್ಲಿ ಅಶ್ಲೀಲ ದೃಶ್ಯಗಳನ್ನು ನೋಡಿದವರು ಯಾವ ಪಕ್ಷದವರು? ಸಿಡಿ ಸುಳಿಯಲ್ಲಿ ಸಿಕ್ಕಿ ರಾಜೀನಾಮೆ ಕೊಟ್ಟ ಶೀಲವಂತರು ಯಾವ ಪಕ್ಷದವರು? ನಿಮ್ಮ ನಾಯಕರ ಲೀಲೆಗಳು ಜನರಿಗೆ ಗೊತ್ತಿಲ್ಲ ಎನ್ನುವ ದರ್ಪವೇ? ಅನಾಚಾರವೆಂಬುದು ಬಿಜೆಪಿ ಕಾಯಕ, ಅಭ್ಯಾಸ, ನಿತ್ಯದ ದಿನಚರಿ ಮತ್ತು ಚಾಳಿ ಎಂದು ಜೆಡಿಎಸ್ ವ್ಯಂಗ್ಯವಾಡಿದೆ

Related Articles

Leave a Reply

Your email address will not be published. Required fields are marked *

Back to top button