ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಜಾರಿಗೆ ಆಗ್ರಹಿಸಿ ಪಾದಯಾತ್ರೆ
ಬಾಗಲಕೋಟೆ: ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯಲ್ಲಿ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ.
ಬಾಗಲಕೋಟೆ ಬೀಳಗಿ ತಾಲೂಕಿನ ಅನಗವಾಡಿ ಘಟಪ್ರಭಾ ನದಿಯಿಂದ ಬೃಹತ್ ಪಾದಯಾತ್ರೆ ಆರಂಭವಾಗಿದ್ದು.ಸುಮಾರು 20 ಕಿಲೋ ಮೀಟರ್ ಯವರೆಗೆ ಪಾದಯಾತ್ರೆ ನಡೆಯಲಿದೆ. ಟಕ್ಕಳಕಿ ಬಳಿ ಕೃಷ್ಣಾ ನದಿ ವರೆಗೂ ಪಾದಯಾತ್ರೆ ನಡೆದು ಮುಕ್ತಾಯಗೊಳ್ಳಲಿದೆ.
ಉತ್ತರ ಕರ್ನಾಟಕ ಸ್ವಾಭಿಮಾನ ವೇದಿಕೆ ಅಡಿಯಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ. ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಎಸ್ ಆರ್ ಪಾಟೀಲ್ ನೇತೃತ್ವದಲ್ಲಿ ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ನಡಿಗೆ ಘೋಷಣೆ ಅಡಿಯಲ್ಲಿ ಪಾದಯಾತ್ರೆ ಆರಂಭವಾಗಿದ್ದು, ಪಾದಯಾತ್ರೆಯಲ್ಲಿ ಗದುಗಿನ ತೋಂಟದಾರ್ಯ ಸ್ವಾಮೀಜಿ, ಇಳಕಲ್ ಮಹಾಂತೇಶ್ವರ ಮಠದ ಗುರುಮಹಾಂತ ಸ್ವಾಮೀಜಿ, ಶಿರೂರ ವಿಜಯಮಹಾಂತ ತೀರ್ಥ ದ ಡಾ. ಬಸವಲಿಂಗ ಸ್ವಾಮೀಜಿ, ಭೋವಿ ಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ,ಗಿರಿಸಾಗರದ ರುದ್ರಮುನಿ ಸ್ವಾಮೀಜಿ ಸೇರಿದಂತೆ 20 ಕ್ಕೂ ಹೆಚ್ಚು ಸ್ವಾಮೀಜಿಗಳು ಭಾಗಿಯಾಗಿದ್ದು.ಪಾದಯಾತ್ರೆಯಲ್ಲಿ ಡೊಳ್ಳು ಭಾರಿಸುತ್ತಾ ಮುಖಂಡರು ಹೆಜ್ಜೆ ಹಾಕುತ್ತಿದ್ದಾರೆ. ಅಪಾರ ಸಂಖ್ಯೆಯಲ್ಲಿ ಸಂತ್ರಸ್ತರು ಭಾಗಿಯಾಗಿದ್ದು, ರಾಜ್ಯ ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆ 3ಹಂತವನ್ನು ಶೀಘ್ರವೇ ಆರಂಭಿಸಬೇಕೆಂದು ಕೂಗು ಹೆಚ್ಚಾಗಿದೆ.
ಬಾಗಲಕೋಟೆ ಜಿಲ್ಲೆಯವರಾದ ಗೋವಿಂದ ಕಾರಜೋಳ ಜಲಸಂಪನ್ಮೂಲ ಸಚಿವರಾಗಿದ್ದು, ಯೋಜನೆ ಜಾರಿಗೆ ಪಾದಯಾತ್ರೆ ಆರಂಭಗೊಂಡಿದೆ. ಪಾದಯಾತ್ರೆ ಕೃಷ್ಣಾ ನದಿಯ ಕೋರ್ತಿ ಕೋಲ್ಹಾರದ ಸೇತುವೆ ಬಳಿ ಜಮಾವಣೆಗೊಂಡು ಕಾರ್ಯಕ್ರಮದ ಮೂಲಕ ಸಾಯಂಕಾಲ ವೇಳೆಗೆ ಮುಕ್ತಾಯವಾಗಲಿದೆ.