Latest

Lakhimpur Kheri violence: ಲಖಿಂಪುರ ಹಿಂಸಾಚಾರ: ಆಶಿಶ್ ಮಿಶ್ರಾಗೆ ಡೆಂಗ್ಯೂ, ಆಸ್ಪತ್ರೆಗೆ ದಾಖಲು

ಲಖನೌ: ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣದದಲ್ಲಿ ಬಂಧಿತರಾಗಿರುವ ಆಶಿಶ್ ಮಿಶ್ರಾ ಡೆಂಗ್ಯೂನಿಂದ ಬಳಲುತ್ತಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಜ್ವರದ ಸ್ವರೂಪ ಡೆಂಘೆ ಮಾದರಿಯಲ್ಲಿ ಇದ್ದು, ಇನ್ನಷ್ಟೇ ಇದರ ಪರೀಕ್ಷೆ ನಡೆಯಬೇಕಿದೆ.

ಆಶಿಶ್​ ಮಿಶ್ರಾಗೆ ಜ್ವರ ಬಂದಿದೆ. ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡಿವೆ. ಆದರೆ ಡೆಂಗ್ಯೂ ಹೌದೋ ಅಲ್ಲವೋ ಎನ್ನುವುದು ತಿಳಿಯುತ್ತಿಲ್ಲ. ರಕ್ತದ ಮಾದರಿಯ ತಪಾಸಣೆ ವರದಿ ಬಂದ ಬಳಿಕವಷ್ಟೇ ನಿಖರವಾಗಿ ಗೊತ್ತಾಗಲಿದೆ ಎಂದು ಲಖಿಂಪುರ ಖೇರಿ ಜಿಲ್ಲಾ ಕಾರಾಗೃಹದ ಪೊಲೀಸ್​ ಅಧೀಕ್ಷಕ ಪಿಪಿ ಸಿಂಗ್ ಮಾಹಿತಿ ನೀಡಿದ್ದಾರೆ. ಆಶಿಶ್ ಅವರ ರಕ್ತದ ಮಾದರಿಯನ್ನು ಲಖನೌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಅಕ್ಟೋಬರ್‌ 3ರಂದು ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರ ಸಹಿತ ಎಂಟು ಮಂದಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿಶ್ ಮಿಶ್ರಾ ಸಹಿತ 13 ಮಂದಿಯನ್ನು ಇದುವರೆಗೆ ಬಂಧಿಸಲಾಗಿದೆ.

Related Articles

Leave a Reply

Your email address will not be published.

Back to top button