Latest

ಲೋಕಸಭೆ ಚುನಾವಣೆಗೆ ನನ್ನ ಸ್ಪರ್ಧೆ ನಿಶ್ಚಿತ: ಮಾಜಿ ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಮುಂದಿನ ವಿಧಾನಸಭಾ ಚುನಾವಣೆಗೆ ಪುತ್ರನಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ್ ಜಾರಕಿಹೊಳಿ ಈಗಿನಿಂದಲೇ ತಯಾರಿ ನಡೆಸಿದ್ದಾರೆ. ಇದಕ್ಕೆ ಸಾಕ್ಷಿ ಎನ್ನುವಂತೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಕರಗುಪ್ಪಿ ಗ್ರಾಮದಲ್ಲಿ ಸತೀಶ್ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಅವರ ಹುಟ್ಟುಹಬ್ಬವನ್ನ ಆಚರಣೆ ಮಾಡಲಾಯಿತು

ರಾಹುಲ್ ಜಾರಕಿಹೊಳಿ ಅಭಿಮಾನಿ ಬಳಗದಿಂದ ಆಯೋಜಿಸಲಾಗಿದ್ದ, ಹುಟ್ಟುಹಬ್ಬದ ಆಚರಣೆಯಲ್ಲಿ ಐದು ಸಾವಿರಕ್ಕೂ ಹೆಚ್ಚಿನ ಜನ ಪಾಲ್ಗೊಂಡಿದ್ದರು. ಅಷ್ಟೇ ಅಲ್ಲದೇ 10ಕ್ಕೂ ಹೆಚ್ಚು ಮಠಾಧೀಶರು ಸಮಾರಂಭದಲ್ಲಿ ಭಾಗವಹಿಸಿ ರಾಹುಲ್ ಜಾರಕಿಹೊಳಿ ಅವರಿಗೆ ಆಶೀರ್ವಾದ ಮಾಡಿದರು. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ರಾಹುಲ್ ಜಾರಕಿಹೊಳಿ ಅವರನ್ನ ಕಣಕ್ಕೆ ಇಳಿಸುವ ನಿಟ್ಟಿನಲ್ಲಿ ಈ ಅದ್ದೂರಿ ಕಾರ್ಯಕ್ರಮವನ್ನ ಆಯೋಜನೆ ಮಾಡಲಾಗಿತ್ತು ಎನ್ನಲಾಗುತ್ತಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಸತೀಶ್ ಜಾರಕಿಹೊಳಿ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಸ್ಪರ್ಧೆ ಮಾಡುವದು ನಿಶ್ಚಿತವಾಗಿದೆ. ಈಗಿನಿಂದಲೇ ನನ್ನ ಪುತ್ರ ರಾಹುಲ್ ಹಾಗೂ ಪುತ್ರಿ ಪ್ರೀಯಾಂಕಾ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದ್ದಾರೆ. ಯಮಕನಮರಡಿ ಕ್ಷೇತ್ರದಿಂದ ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನ ತೀರ್ಮಾನ ಮಾಡಬೇಕಿದೆ ಎಂದರು.

Related Articles

Leave a Reply

Your email address will not be published.

Back to top button