Latest

ತ್ಯಾಜ್ಯ ವಿಲೇವಾರಿ ಕುರಿತು ಜಾಗೃತಿ ಅಗತ್ಯ- ಕ್ಲೀನ್ ಕರ್ನಾಟಕಕ್ಕೆ ಸಚಿವ ಡಾ.ನಾರಾಯಣಗೌಡ ಚಾಲನೆ

ಬೆಂಗಳೂರು: ಬೆಂಗಳೂರಿನ ಅರಮನೆ ಆವರಣದಲ್ಲಿ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣ ಗೌಡ ಶುಕ್ರವಾರ ಚಾಲನೆ ನೀಡಿದರು.

ಬೆಂಗಳೂರು ಅರಮನೆ, ಮೈಸೂರು ಅರಮನೆ, ಹಂಪಿ, ಶ್ರೀರಂಗಪಟ್ಟಣ, ಮಡಿಕೇರಿ ಕೋಟೆ,ಗೋಳಗುಮ್ಮಟ ಸೇರಿದಂತೆ ಕರ್ನಾಟಕದ ಪ್ರಸಿದ್ದ, ಐತಿಹಾಸಿಕ ಸ್ಥಳಗಳಲ್ಲಿ ಕ್ಲೀನ್ ಇಂಡಿಯಾ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ.

ದೇಶದಲ್ಲಿ ಅಕ್ಟೋಬರ್ 1 ರಿಂದ 31 ರವರೆಗೂ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ.

ಕ್ಲೀನ್ ಇಂಡಿಯಾ ಅಭಿಯಾನದಲ್ಲಿ NYK, NSS ಹಾಗೂ ಕ್ರೀಡಾ ಇಲಾಖೆಯ 1,57, 814 ಸ್ವಯಂ ಸೇವಕರು ಪಾಲ್ಗೊಳ್ಳುವರು.

ಕ್ಲೀನ್ ಇಂಡಿಯಾ ಅಭಿಯಾನಕ್ಕೆ ರಾಜ್ಯದಲ್ಲಿ ಉತ್ತಮ ಸ್ಪಂದನೆ ಸಿಗುತ್ತಿದೆ. ಕರ್ನಾಟಕದಲ್ಲಿ ಇದುವರೆಗೂ 4,65,000 ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಲಾಗಿದೆ. ಕರ್ನಾಟಕದಿಂದ 6 ಲಕ್ಷ ಟನ್ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸುವ ಮೂಲಕ ನಿರೀಕ್ಷಿತ ಗುರಿಯನ್ನೂ ಮೀರಿ ಸಾಧನೆ ಮಾಡಲಿದ್ದೇವೆ ಎಂದರು.

ವಿಶ್ವದಲ್ಲೇ ಸ್ವಚ್ಛ ಭಾರತ ಮಾಡಲು ನಾವೆಲ್ಲರೂ ಪಣ ತೋಡೋಣ‌. ಸ್ವಚ್ಛ ಭಾರತವಾದರೇ ದೇಶ ಮತ್ತಷ್ಟು ಪ್ರಗತಿ ಕಾಣಲಿದೆ ಎಂದು ಹೇಳಿದರು.

ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ , ಸ್ವಚ್ಚತಾ ಪ್ರತಿಜ್ಞಾ ವಿಧಿ ಭೋದಿಸಿದರು.

Related Articles

Leave a Reply

Your email address will not be published.

Back to top button