Latest

ಸಾರ್ವತ್ರಿಕ ಚುನಾವಣೆ ಮೇಲೆ ಉಪಚುನಾವಣೆ ಫಲಿತಾಂಶ ಯಾವುದೇ ಪರಿಣಾಮ ಬಿರುವುದಿಲ್ಲ: ಶಾಸಕ ಮಹೇಶ್ ಕುಮಟಳ್ಳಿ

ಬೆಳಗಾವಿ: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಫಲಿತಾಂಶ 3023 ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಅಥಣಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದರು.

ಅಥಣಿ ಪಟ್ಟಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಾನಗಲ್ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್​​​ ಅವರು ಅಲ್ಪ ಮತಗಳಿಂದ ಸೋಲು ಆಗಿದೆ, ಜನರ ತೀರ್ಪಿಗೆ ನಾವು ಸ್ವಾಗತ ಬಯಸುತ್ತೇವೆ. ಅದೆ ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರು 30 ಸಾವಿರ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹಾನಗಲ್ ನಲ್ಲಿ ಸೋತಿದ್ದರು ಬಿಜೆಪಿ ಸರ್ಕಾರ ಮೇಲೆ ಹಾಗೂ ಮುಖ್ಯ ಮಂತ್ರಿಗಳ ಮೇಲೆ ಯಾವುದೇ ಪರಿಣಾಮ ಬಿರುವುದಿಲ್ಲ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಅಲ್ಪ ಮತಗಳಿಂದ ಸೋಲಾಗಿದೆ. ಜನರ ತೀರ್ಪಿಗೆ ನಾವು ಸ್ವಾಗತ ಬಯಸುತ್ತೇವೆ. ಈ ಚುನಾವಣೆ ಫಲಿತಾಂಶ ಮುಖ್ಯಮಂತ್ರಿ ನಾಯಕತ್ವದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲರ ನಾಯಕತ್ವದಲ್ಲಿ ನಾವು ಚುನಾವಣೆ ಎದುರಿಸುತ್ತೇವೆ. 2023 ರಲ್ಲಿ ಕರ್ನಾಟದಲ್ಲಿ ಬಿಜೆಪಿ ಸರ್ಕಾರ ಮತ್ತೆ ರಚನೆ ಆಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೆಲೆ ಏರಿಕೆ ಇವತ್ತಿನಿಂದ ಆಗುತ್ತಿಲ್ಲ, ಕಳೆದ 60 ವರ್ಷಗಳಿಂದ ಬೆಲೆ ಏರಿಕೆ ಆಗುತ್ತಿದೆ. ದಿನಮಾನಗಳು ಕಳೆದಂತೆ ಬೆಲೆ ಏರಿಕೆ ಇಳಿಕೆ ಆಗುತ್ತಿದೆ. ನಾನು ಚಿಕ್ಕವನಿದ್ದಾಗ ಹತ್ತು ಪೈಸೆ ಹಣ ಚಲಾವಣೆಯಲ್ಲಿ ಇತ್ತು. ಆದರೆ ಸದ್ಯ ಹತ್ತು, ಇಪ್ಪತ್ತು ಪೈಸೆ ಗಳು ಚಲಾವಣೆ ಆಗುತ್ತಿಲ್ಲ. ದಿನಗಳು ಕಳೆದಂತೆ ದರ ಏರಿಕೆ ಆಗುತ್ತಿದೆ ತೈಲ ಬೆಲೆ ಅಗತ್ಯ ವಸ್ತುಗಳ ಬೆಲೆ ಎರೆಕೆಯಿಂದ ಚುಣಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ಸರ್ಕಾರ ಪಂಚಮಸಾಲಿ ಸಮಾಜಕ್ಕೆ ಅತಿ ಗೌರವವನ್ನು ನೀಡಿದ್ದಾರೆ. ಇದರಲ್ಲಿ ಎರಡು ಮಾತಿಲ್ಲ, ಪಂಚಮಸಾಲಿ ಸಮಾಜದ ಜೊತೆಗೆ ಹಲವಾರು ಜನಾಂಗದವರು ಮೀಸಲಾತಿ ನೀಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ, ಕಾನೂನು ಬದ್ದವಾಗಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುತ್ತಾರೆ. ಪಂಚಮಸಾಲಿ ಸಮಾಜಕ್ಕೆ ಬಿಜೆಪಿ ಸರ್ಕಾರ ಅತಿ ಗೌರವವನ್ನು ನೀಡಿದ್ದಾರೆ ಎಂದು ಹೇಳಿದರು.

ಸಿಂದಗಿ ಉಪಚುನಾವಣೆ ಉಸ್ತುವಾರಿ ಆಗಿರುವ ಲಕ್ಷಣ ಸವದಿ ಅವರು ಚುಣಾವಣೆ ಚಾಣಾಕ್ಷ ಅವರಿಗೆ ನೀಡಿದ ಚುಣಾವಣೆಯಲ್ಲಿ ಜಯ ಸಾಧಿಸುತ್ತಾರೆ. ಅವರಿಗೆ ವರಿಷ್ಠರು ಸಚಿವ ಸ್ಥಾನ ನೀಡಲಿ, ಎಂದು ಪ್ರತಿಕ್ರಿಯಿಸಿದ್ದರು. ಹಾಗೂ ನಾನು ಸಚಿವ ಸ್ಥಾನದ ಆಕಾಂಕ್ಷಿ ಬಿಜೆಪಿ ವರಿಷ್ಠರು ನಿರ್ಧರಿಸುತ್ತಾರೆ ಎಂದರು.

ನೆರೆ ಸಂತ್ರಸ್ತರಿಗೆ ಸರ್ಕಾರದಿಂದ ಪರಿಹಾರ ಬಿಡುಗಡೆ ಮಾಡಲಾಗಿದೆ: ಕಳೆದ ಬಾರಿ ಕೃಷ್ಣಾ ನದಿ ಪ್ರವಾಹದಿಂದ ತಾಲೂಕಿನ ಹಲವಾರು ಗ್ರಾಮಗಳನ್ನು ಬಾಧಿತ ವಾಗಿದೆ. ಸರ್ಕಾರದಿಂದ ಬೆಳೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಹಾಗೂ ಸರ್ಕಾರದ ಮಾನದಂಡ ಪ್ರಕಾರ ತುರ್ತು ಹತ್ತು ಸಾವಿರ ರೂಪಾಯಿ ಪರಿಹಾರ ಹಣ ಈಗಾಗಲೇ ಹಲವಾರು ಊರುಗಳಿಗೆ ನೀಡಲಾಗಿದೆ ಎಂದೂ ಹೇಳಿದರು.

Related Articles

Leave a Reply

Your email address will not be published. Required fields are marked *

Back to top button