Latest

ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಮೈಸೂರು ದಸರಾಗೆ ಸಿಎಂ ಬೊಮ್ಮಾಯಿ ಚಾಲನೆ

ವರದಿ: ಅಶೋಕ್

ಮೈಸೂರು: ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿಎಂ ಚಾಲನೆ ನೀಡಿದ್ದಾರೆ. ಸಿಎಂಗೆ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಮೇಯರ್ ಸುನಂದಾ ಪಾಲನೇತ್ರ, ಮತ್ತು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಸಾಥ್ ನೀಡಿದರು.

ಇದಕ್ಕೂ ಮುನ್ನ ಜಂಬೂಸವಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಶುಭಲಗ್ನದಲ್ಲಿ ಅರಮನೆಯ ಉತ್ತರ ದಿಕ್ಕಿನ ಜಯಮಾರ್ತಾಂಡ ದ್ವಾರದಲ್ಲಿ ಜೋಡಿ ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಚಾಲನೆ ನೀಡಿದರು.

ಕೋಟೆ ಆಂಜನೇಯಸ್ವಾಮಿ ದೇವಾಲಯದ ಮುಂಭಾಗ ಸಿಎಂ ಜಂಬೂಸವಾರಿಗೆ ಚಾಲನೆ ನೀಡಿದ್ದಾರೆ. ಕೊರೊನಾ ಹಿನ್ನೆಲೆ ಈ‌ ಬಾರಿ ಸರಳ ದಸರಾ ಆಚರಿಸಲಾಗುತ್ತಿದೆ. ಈ ಬಾರಿ ಕೇವಲ 6 ಸ್ತಬ್ಧ ಚಿತ್ರಗಳನ್ನು ಮಾತ್ರ ಮೆರವಣಿಗೆ ಮಾಡಲಾಗುತ್ತಿದೆ.

Related Articles

Leave a Reply

Your email address will not be published.

Back to top button