Latest

Sri Chamundeshwari Temple: ಇಂದು ಮತ್ತು ನಾಳೆ ರಾತ್ರಿ 10 ಗಂಟೆವರೆಗೆ ಚಾಮುಂಡೇಶ್ವರಿ ದೇವಾಲಯ ಓಪನ್

ಮೈಸೂರು : ಚಾಮುಂಡೇಶ್ವರಿ ದೇವಾಲಯವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿದ್ದು ಇಂದು ಮತ್ತು ನಾಳೆ ರಾತ್ರಿ 10 ಗಂಟೆಯವರೆಗೆ ದೇವಾಲಯದ ಬಾಗಿಲು ತೆರೆಯುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸೋಮಶೇಖರ್ ಹೇಳಿದ್ದಾರೆ.

ಮೈಸೂರು ಅರಮನೆಯಲ್ಲಿ ಮಾತನಾಡಿದ ಅವರು ಎರಡು ದಿನಗಳ‌ ಕಾಲ ರಾತ್ರಿ 10 ಗಂಟೆಯವರೆಗೆ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ. ಚಾಮುಂಡೇಶ್ವರಿ ದೇವಸ್ಥಾನವನ್ನು ರಾತ್ರಿ 8 ಗಂಟೆಗೆ ಬಂದ್ ಮಾಡಲಾಗುತ್ತಿತ್ತು. ಆದ್ರೆ ನಗರದ ದೀಪಾಲಂಕಾರ ನೋಡಿಕೊಂಡು ದೇವಸ್ಥಾನಕ್ಕೆ ತೆರಳುವವರು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ.

ಶುಕ್ರವಾರದವರೆಗೆ ರಾತ್ರಿ 10 ಗಂಟೆಯವರೆಗೆ ದರ್ಶನದ ಅವಧಿ ವಿಸ್ತರಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಂಬೂ ಸವಾರಿಗೆ ಎಲ್ಲ ಸಿದ್ಧತೆ ಆಗಿದೆ. ಕೋವಿಡ್ ನಿಯಮಗಳನ್ನು ಉಲ್ಲಂಘಿಸದೆ 500 ಜನರಿಗೆ ಜಂಬೂಸವಾರಿ ವೀಕ್ಷಿಸಲು ಅವಕಾಶ ನೀಡಲಾಗಿದೆ.

ಕೆಲವರು ಒಂದು ವಾರ, ಮತ್ತೆ ದೀಪಾವಳಿವರೆಗೆ ದೀಪಾಲಂಕಾರ ವಿಸ್ತರಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ. ಈ ಕುರಿತು ಮುಖ್ಯಮಂತ್ರಿ ಅವರ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದು ಎಂದು ತಿಳಿಸಿದರು.

ಈ ಬಗ್ಗೆ ಕೆಲ ದಿನಗಳ ಹಿಂದೆ ಮೈಸೂರು ಸಂಘಸಂಸ್ಥೆಗಳ ಒಕ್ಕೂಟವು ಸಹ ಒಂದು ವಾರ ದೀಪಾಲಂಕಾರ ವಿಸ್ತರಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದರು.

Related Articles

Leave a Reply

Your email address will not be published.

Back to top button