Latest
ಬೆಳಗಾವಿ ದುರ್ಘಟನೆಗೆ ಪ್ರಧಾನಿ ಮೋದಿ ಸಂತಾಪ: ಮೃತರಿಗೆ 2 ಲಕ್ಷ ಪರಿಹಾರ ಘೋಷಣೆ
ಬೆಂಗಳೂರು : ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿಯಲ್ಲಿ ಕಳೆದ ರ ರಾತ್ರಿ ಮನೆ ಕುಸಿದು ಮೂರು ಮಕ್ಕಳು ಸೇರಿದಂತೆ ಏಳು ಮಂದಿ ಮೃತಪಟ್ಟಿದ್ದು, ಈ ಬಗ್ಗೆ ಇಂದು ಮುಂಜಾನೆ ಪ್ರಧಾನಿ ನರೇಂದ್ರ ಮೋದಿ ಟ್ವಿಟ್ ಮಾಡಿ ಬದುಕುಳಿದಿರುವ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಅಲ್ಲದೆ, ಸಾವಿಗೀಡಾದ ವ್ಯಕ್ತಿಗಳ ಪರಿಹಾರವಾಗಿ ತಲಾ ರೂ.2 ಲಕ್ಷ ರೂಪಾಯಿಯಂತೆ ಪ್ರಧಾನ ಮಂತ್ರಿ ರಾಷ್ಟ್ರೀಯ ವಿಪತ್ತು ನಿಧಿ ಅಡಿಯಲ್ಲಿ ಕುಟುಂಬದ ಬದುಕುಳಿದಿರುವ ಸದಸ್ಯರಿಗೆ ಪರಿಹಾರ ನೀಡಲಾಗುವುದು ಎಂದು ಟ್ವಿಟ್ ನಲ್ಲಿ ತಿಳಿಸಿದ್ದಾರೆ.
ನಿನ್ನೆಯಷ್ಟೇ ಸಿಎಂ ಬಸವರಾಜ ಬೊಮ್ಮಾಯಿ ತಲಾ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿಯೇ ಮೃತರ ಸಾಮೂಹಿಕ ಅಂತ್ಯಕ್ರಿಯೆಯನ್ನು ಜಿಲ್ಲಾಡಳಿತದ ವತಿಯಿಂದ ಅದೇ ಗ್ರಾಮದ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಮೃತಪಟ್ಟಿದ್ದ ಒಂದೇ ಕುಟುಂಬರ ಆರು ಮಂದಿಯ ಅಂತ್ಯಕ್ರಿಯೆ ಒಂದು ಕಡೆಯಾದರೆ, ಪಕ್ಕದ ಮನೆಯ ಬಾಲಕಿಯ ಅಂತ್ಯಕ್ರಿಯೆಯನ್ನು ಪ್ರತ್ಯೇಕವಾಗಿ ನೆರವೇರಿಸಲಾಗಿದೆ.