Latestಸಿನಿಮಾ

ನಟ ಪುನೀತ್ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಅವಕಾಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಕಂಠೀರವ ಸ್ಟೇಡಿಯಂನಲ್ಲಿ ಸಿದ್ಧತೆ ನಡೆಸಲಾಗಿದೆ.

ಸಂಜೆ 5 ಗಂಟೆಗೆ ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣಕ್ಕೆ ಸ್ಥಳಾಂತರಿಸಲಾಗುತ್ತಿದ್ದು, ಇಂದು ಸಂಜೆಯಿಂದ ನಾಳೆ ವರೆಗೂ ಅಭಿಮಾನಿಗಳಿಗೆ, ಸಾರ್ವಜನಿಕರಿಗೆ, ಪುನೀತ್ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.

ನಟ ಪುನೀತ್ ರಾಜ್ ಕುಮಾರ್ ಅತಿ ಚಿಕ್ಕವಯಸ್ಸಿನಲ್ಲಿಯೇ ವಿಧಿವಶರಾಗಿರುವುದು ಇಡೀ ಕನ್ನಡ ನಾಡಿಗೆ, ಚಿತ್ರರಂಗಕ್ಕೆ ಆಘಾತವನ್ನುಂಟು ಮಾಡಿದೆ. ಅಭಿಮಾನಿಗಳು, ಉದ್ವೇಗಕ್ಕೆ, ಆವೇಶಕ್ಕೆ ಒಳಗಾಗಬಾರದು, ಶಾಂತಿಯನ್ನು ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಸಕಲ ಸರ್ಕಾರಿ ಗೌರವದೊಂದಿಗೆ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಕುಟುಂಬದ ಇಚ್ಛೆಯಂತೆಯೇ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ತಿಳಿಸಿದರು.

Related Articles

Leave a Reply

Your email address will not be published.

Back to top button