Latestಸಿನಿಮಾ

ಸಾವಿನಲ್ಲೂ ಸಾರ್ಥಕತೆ ಮೆರೆದ ಅಪ್ಪು : ತಂದೆಯಂತೆಯೇ ನೇತ್ರದಾನ ಮಾಡಿದ ಪುನೀತ್‌ ರಾಜ್‌ ಕುಮಾರ್‌

ಬೆಂಗಳೂರು: ಜಿಮ್ ಮಾಡುವ ವೇಳೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದ ಪುನೀತ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ತೀವ್ರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

ವರನಟ ಡಾ. ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಅವರ ಕಿರಿಯ ಪುತ್ರನಾಗಿ 1975ರಲ್ಲಿ ಜನಿಸಿದ್ದ ಪುನೀತ್ ರಾಜ್ ಕುಮಾರ್ ಅವರ ಮೊದಲ ಹೆಸರು ಲೋಹಿತ್. ಬಾಲನಟನಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ಪವರ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದಾರೆ. 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟನೆ ಮಾಡಿದ್ದಾರೆ .

ಬಾಲ್ಯದಲ್ಲಿ ತನ್ನ ತಂದೆ ರಾಜಕುಮಾರ್ ಅಭಿನಯದ ಚಿತ್ರಗಳಲ್ಲಿ ಬಾಲ ನಟನಾಗಿ ವಸಂತ ಗೀತ (1980), ಭಾಗ್ಯದಾತ (1981), ಚಲಿಸುವ ಮೋಡಗಳು (1982), ಎರಡು ನಕ್ಷತ್ರಗಳು (1983) ಮತ್ತು ಬೆಟ್ಟದ ಹೂವು (1985) ಅವರು ನಟಿಸಿದ ಚಿತ್ರಗಳ ನಟನೆಗೆ ಮೆಚ್ಚುಗೆ ಪಡೆದರು. ಅವರ ಬೆಟ್ಟದ ಹೂವು ಚಿತ್ರದ ರಾಮು ಪಾತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದುಕೊಂಡಿದ್ದರು.

ಪುನೀತ್ ರಾಜ್ ಕುಮಾರ್ ಡಿಸೆಂಬರ್ 1 ,1999 ರಂದು ಅಶ್ವಿನಿ ರೇವಂತ್ ರನ್ನು ವಿವಾಹವಾದರು. ಪುನೀತ್ ಹಾಗೂ ಅಶ್ವಿನಿ ದಂಪತಿಗೆ ದ್ರಿತಿ ಮತ್ತು ವಂದಿತಾ ಎಂಬ ಇಬ್ಬರು ಪುತ್ರಿಯರಿದ್ದಾರೆ. ಇದರ ಜೊತೆಗೆ ಇಬ್ಬರು ಸಹೋದರರು, ಮೂವರು ಸಹೋದರಿಯರನ್ನು ಅಗಲಿದ್ದಾರೆ.

2002ರಲ್ಲಿ ಪುನೀತ್ ‘ಅಪ್ಪು’ ಚಿತ್ರದ ಮೂಲಕ ನಾಯಕ ನಟನಾಗಿ ಸ್ಯಾಂಡಲ್ ವುಡ್ ಗೆ ಪದಾರ್ಪಣೆ ಮಾಡಿದರು. ಬಳಿಕ ಅಭಿ (2003), ಆಕಾಶ್ (2005), ಅರಸು (2007), ಮಿಲನ (2007), ಜಾಕೀ (2010), ಹುಡುಗರು (2011), ಅಣ್ಣಾ ಬಾಂಡ್ (2012) ಮತ್ತು ಪವರ್ (2014) ಸೇರಿದಂತೆ ಯಶಸ್ವಿ ಚಿತ್ರಗಳಲ್ಲಿ ಅಭಿನಯಿಸಿದ್ದರು.
ಬಿಂದಾಸ್, ವಂಶಿ, ರಾಜ್ ದ ಶೋ ಮ್ಯಾನ್. ಪ್ರಥ್ವಿ, ರಾಮ್, ಜಾಕಿ, ದೊಡ್ಮನೆ ಹುಡುಗ, ರಾಜಕುಮಾರ, ಅಂಜನಿ ಪುತ್ರ, ನಟಸಾರ್ವಭೌಮ, ವೀರ ಕನ್ನಡಿಗ ಪುನೀತ್ ಅವರ ಜನಪ್ರಿಯ ಚಿತ್ರಗಳಾಗಿವೆ.

ತಂದೆಯಂತೆಯೇ ನೇತ್ರದಾನ ಮಾಡಿದ ಪುನೀತ್‌ ರಾಜ್‌ ಕುಮಾರ್‌:

ನಟ ಪುನೀತ್ ರಾಜ್ ಕುಮಾರ್ ನೇತ್ರದಾನ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ವರನಟ ಡಾ.ರಾಜ್ ಕುಮಾರ್ ನೇತ್ರದಾನದ ಪ್ರೇರಕರಾಗಿ ಸಮಾಜದ ಜಾಗೃತಿ ಮೂಡಿಸುವ ಕಾರ್ಯ ನಡೆಸಿದ್ದರು. ಇದೀಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಸ್ವಯಂ ನೇತ್ರದಾನ ಮಾಡುವ ಮೂಲಕ ಮಾನವೀಯತೆಯನ್ನ ಮೆರೆದಿದ್ದಾರೆ.

Related Articles

Leave a Reply

Your email address will not be published.

Back to top button