Latest

ಬಿಜೆಪಿ ಸೋಲಿಸಿದರೆ ತೈಲಬೆಲೆ ಇಳಿಯುತ್ತದೆ; ಇದು ಪ್ರಧಾನಿ ಮೋದಿ ಪಾಠವೆಂದ ಸಿದ್ದರಾಮಯ್ಯ

ಬೆಂಗಳೂರು: ಯುಪಿಎ ಕಾಲದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 125 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ 65 ರೂಪಾಯಿಗಳಾಗಿತ್ತು. ಬಿಜೆಪಿ ಸರ್ಕಾರದಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 82 ಡಾಲರ್ ಇದ್ದಾಗ ಪೆಟ್ರೋಲ್ ಬೆಲೆ ನೂರು ರೂಪಾಯಿಗೆ ಇಳಿಸಿದ್ದು ಮಹಾನ್ ಸಾಧನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಅವರು ಈ ಕುರಿತು ಪೋಸ್ಟ್‌ ಮಾಡಿದ್ದು, ಚುನಾವಣೆಯಲ್ಲಿ ಮತದಾರರು ಬಿಜೆಪಿ ಸೋಲಿಸಿದರೆ ಪೆಟ್ರೋಲ್ –ಡೀಸೆಲ್ ಬೆಲೆ ಇಳಿಯುತ್ತದೆ ಎನ್ನುವ ಪಾಠವನ್ನು ಹೇಳಿಕೊಟ್ಟ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು. ಇದು ಪ್ರಧಾನಿಗಳು ನೀಡಿದ ದೀಪಾವಳಿ ಕೊಡುಗೆ ಅಲ್ಲ, ಇದು ದೇಶದಾದ್ಯಂತ ನಡೆದ ಉಪಚುನಾವಣೆಗಳ ಕೊಡುಗೆ ಎಂದು ವ್ಯಂಗ್ಯವಾಡಿದ್ದಾರೆ.

ಅಡುಗೆ ಅನಿಲ ಬೆಲೆ ಸಾವಿರ ರೂಪಾಯಿ ತಲುಪಿದೆ, ಆಹಾರ ಧಾನ್ಯ, ಖಾದ್ಯತೈಲದ ಬೆಲೆ ಏರುತ್ತಲೇ ಇದೆ. ಈ ಬೆಲೆಗಳು ಕೂಡಾ ಇಳಿಯಬೇಕಾದರೆ ಬಿಜೆಪಿಯನ್ನು ಇನ್ನಷ್ಟು ಚುನಾವಣೆಗಳಲ್ಲಿ ಮತದಾರರು ಸೋಲಿಸುತ್ತಲೇ ಇರಬೇಕು. ಸದ್ಯದಲ್ಲೇ ನಮ್ಮ ರಾಜ್ಯದಲ್ಲಿ ತಾಲೂಕು ಮತ್ತು ಜಿಲ್ಲಾ ಪಂಚಾಯತಿಗಳಿಗೆ ಹಾಗೂ ಬೆಂಗಳೂರು ಮಹಾನಗರಪಾಲಿಕೆಗೆ ಚುನಾವಣೆಗಳು ನಡೆಯಲಿವೆ. ನರೇಂದ್ರ ಮೋದಿ ಅವರು ಹೇಳಿಕೊಟ್ಟಿರುವ ಪಾಠವನ್ನು ಮತದಾರರು ನೆನಪಲ್ಲಿಟ್ಟುಕೊಂಡು ಮತದಾನ ನಡೆಸಬೇಕು ಎಂದಿದ್ದಾರೆ.

Related Articles

Leave a Reply

Your email address will not be published.

Back to top button