Latest
ಆಕಸ್ಮಿಕವಾಗಿ ಹೊತ್ತಿ ಉರಿದ ಚಲಿಸುತ್ತಿದ್ದ ಕಾರು: ಬಚಾವ್ ಆದ ಕುಟುಂಬ
ಕಲಬುರಗಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಕಲಬುರಗಿಯಲ್ಲಿ ನಡೆದಿದ್ದು, ಕೂದಲೇಳೆ ಅಂತರದಲ್ಲಿ ಕುಟುಂಬವೊಂದು ಪ್ರಾಣಾಪಾಯದಿಂದ ಪಾರಾಗಿದೆ.
ನಗರದ ಜಿಲ್ಲಾಸ್ಪತ್ರೆಯ ಎದುರಿಗೆ ನಿನ್ನೆ ರಾತ್ರಿ ಘಟನೆ ನಡೆದಿದೆ. ಮಳೆ ಸುರಿಯುತ್ತಿದ್ದರೂ ಕ್ಷಣಾರ್ಧದಲ್ಲಿ ಕಾರು ಸಂಪೂರ್ಣ ಸುಟ್ಟು ಬಸ್ಮ ಆಗಿದೆ. ಐ20 ಕಾರು ಆಹುತಿಯಾದ ಕಾರು. ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣವೇ ಎಚ್ಚೆತ್ತ ಪ್ರಯಾಣಿಕರು ಕಾರ್ ನ್ನು ನಿಲ್ಲಿಸಿ ಕಾರಿಂದ ಇಳಿದು ಜೀವ ಉಳಿಸಿಕೊಂಡಿದ್ದಾರೆ. ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ