Latest
T20 world Cup: ಅಭ್ಯಾಸ ಪಂದ್ಯದಲ್ಲಿ ಆಸೀಸ್ ವಿರುದ್ಧ ಭಾರತಕ್ಕೆ ಜಯ
ದುಬೈ: ಟಿ20 ವಿಶ್ವಕಪ್ ಗೆಲ್ಲುವ ಫೇವರಿಟ್ ತಂಡಗಳಲ್ಲಿ ಒಂದಾಗಿರುವ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ 8 ವಿಕೆಟ್ ಗಳ ಅಂತರದಲ್ಲಿ ಜಯ ಗಳಿಸಿದೆ. ಮೊದಲ ಅಭ್ಯಾಸ ಪಂದ್ಯದಲ್ಲೂ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಜಯ ಗಳಿಸಿತ್ತು.
ಟಾಸ್ ಗೆದ್ದು ಬ್ಯಾಂಟಿಂಗ್ ಆಯ್ದುಕೊಂಡ ಆಸ್ಟ್ರೇಲಿಯಾ 5 ವಿಕೆಟ್ ನಷ್ಟಕ್ಕೆ ಕೇವಲ 152 ರನ್ ಗಳಿಸಿತು. ಸ್ಟೀವನ್ ಸ್ಮಿತ್ (57) ಹಾಗೂ ಮಾರ್ಕಸ್ ಸ್ಟೋನಿಸ್ (41) ಆಸೀಸ್ ಸಾಧಾರಣ ಮೊತ್ತಕ್ಕೆ ನೆರವಾದರು.
ಭಾರತದ ಪರ ಆರಂಭಿಕ ಆಟಗಾರರಾದ ಕೆ.ಎಲ್. ರಾಹುಲ್ (39) ಹಾಗೂ ರೋಹಿತ್ ಶರ್ಮಾ (60) ಉತ್ತಮ ತಳಪಾಯ ಹಾಕಿದರು. ನಂತರ ಸೂರ್ಯಕುಮಾರ್ ಯಾದವ್ (38) ಹಾಗೂ ಹಾರ್ದಿಕ್ ಪಾಂಡ್ಯ (14) ಜಯದ ಹಾದಿಯನ್ನು ಸುಗಮಗೊಳಿಸಿ ಇನ್ನೂ 2.1 ಓವರ್ ಬಾಕಿ ಇರುವಾಗಲೇ ಜಯದ ಗುರಿ ತಲುಪಿತು.
ಟಿ20 ವಿಶ್ವಕಪ್ ನಲ್ಲಿ ಭಾರತ ತನ್ನ ಮೊದಲ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.