Latest

Thunderbolt: ಕಲಬುರಗಿ ಜಿಲ್ಲೆಯಲ್ಲಿ ಸಿಡಿಲು ಬಡೆದು ಇಬ್ಬರ ದುರ್ಮರಣ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಗುಡುಗು ಸಿಡಿಲು‌ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಸಿಡಿಲು ಹೊಡೆತಕ್ಕೆ ಇಬ್ಬರು‌ ದುರ್ಮರಣ ಹೊಂದಿದ್ದಾರೆ.

ಚಿತ್ತಾಪುರ ತಾಲೂಕಿನ ಬಳವಡಗಿ ಗ್ರಾಮದಲ್ಲಿ ಸಿಡಲಿಗೆ ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ. ರಾಜ್​ಅಹ್ಮದ್ (65) ಜಬ್ಬಾರ್ (32) ಮೃತ ಕೂಲಿ ಕಾರ್ಮಿಕರು. ಜಮೀನಿನಲ್ಲಿ ಕೂಲಿ ಕೆಲಸಕ್ಕೆ ತೆರಳಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.‌

ಮನೆಗೆ ಆಧಾರ ಸ್ಥಂಭವಾಗಿದ್ದವರನ್ನು ಕಳೆದುಕೊಂಡ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರೀಶಿಲನೆ ಮಾಡಿದ್ದಾರೆ. ಈ ಕುರಿತು ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published.

Back to top button