Latestಸಿನಿಮಾ

Actor Sathyajith: ಕನ್ನಡ ಚಿತ್ರರಂಗದ ಹಿರಿಯ ನಟ ಸತ್ಯಜಿತ್​ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ನ ಹಿರಿಯ ನಟ ಸತ್ಯಜಿತ್ (72) ಅನಾರೋಗ್ಯ ಹಿನ್ನೆಲೆಯಲ್ಲಿ ಕೆಲದಿನಗಳಿಂದ ಸತ್ಯಜಿತ್ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ತಡ ರಾತ್ರಿ 2 ಗಂಟೆ ವೇಳೆಗೆ ಕೊನೆಯುಸಿರೆಳೆದಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಗ್ಯಾಂಗ್ರಿನ್ ನಿಂದಾಗಿ ಒಂದು ಕಾಲು ಕಳೆದುಕೊಂಡಿದ್ದ ಸತ್ಯಜಿತ್ ಹಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸತ್ಯಜಿತ್ ಹಾರ್ಟ್ ಸ್ಟ್ರೋಕ್ ಹಾಗೂ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು, ನಾಲ್ಕು ವರ್ಷಗಳ ಹಿಂದೆ ಗ್ಯಾಂಗ್ರಿನ್ ಸಮಸ್ಯೆಯಿಂದ ಎಡ ಕಾಲನ್ನು ಕಳೆದುಕೊಂಡಿದ್ದರು.

ಇನ್ನು ಬೆಂಗಳೂರಿನ ಹೆಗಡೆ ನಗರದಲ್ಲಿರುವ ನಿವಾಸಕ್ಕೆ ಪಾರ್ಥಿವ ಶರೀರ ತರಲಾಗಿದ್ದು, ಹೆಗಡೆನಗರದ ಚಿತಾಗಾರದಲ್ಲಿ ಅಂತ್ಯ ಸಂಸ್ಕಾರ ಮಾಡಲು ಕುಟುಂಬ ವರ್ಗ ತೀರ್ಮಾನ ಮಾಡಿಕೊಂಡಿದೆ ಎಂದು ಪುತ್ರ ಆಕಾಶ್ ತಿಳಿಸಿದ್ದಾರೆ.

ಸತ್ಯಜಿತ್ ಅವರು ಮೂವರು ಮಕ್ಕಳು ಹಾಗು ಪತ್ನಿಯನ್ನು ಅಗಲಿದ್ದಾರೆ. ಸತ್ಯಜಿತ್ ಅವರು 1986ರಿಂದಲೂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದು, 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಶಿವರಾಜ್ ಕುಮಾರ್, ಪುನೀತ್ ರಾಜ್‍ಕುಮಾರ್, ಸುದೀಪ್, ಸೇರಿದಂತೆ ಸಾಕಷ್ಟು ಕಲಾವಿದರ ಸಿನಿಮಾಗಳಲ್ಲಿ ಸತ್ಯಜಿತ್‌ ಖಳನಟ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದರು.

Related Articles

Leave a Reply

Your email address will not be published.

Back to top button