Latest

ಈ ಬಾರಿಯ ಚಳಿಗಾಲ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯಲಿದೆ: ಬಸವರಾಜ್​​ ಹೊರಟ್ಟಿ

ಧಾರವಾಡ: ಈ ಬಾರಿಯ ಚಳಿಗಾಲ ಅಧಿವೇಶನ ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಯಲಿದೆ. ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ ಹಾಗೂ ಸಭಾಪತಿ ಇದ್ದಾರೆ, ಹಾಗಾಗಿ ಚಳಿಗಾಲ ಅಧಿವೇಶನವು ವ್ಯವಸ್ಥಿತಯಾಗಿ ನಡೆಯಲಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿಶ್ವಾಸ ವ್ಯಕ್ತಪಡಿಸಿದರು.

ಹುಬ್ಬಳ್ಳಿಯಲ್ಲಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಮಾರು ಮೂರು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆಗೆ ಬೆಳೆಗಾವಿ ಅಧಿವೇಶನ ಸಹಕರಿಯಾಗಲಿದ್ದು, ಈ ನಿಟ್ಟಿನಲ್ಲಿ ಈ ಬಾರಿಗೆ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ವ್ಯವಸ್ಥಿತ ರೀತಿಯಲ್ಲಿ ಅಧಿವೇಶನ ನಡೆಸಲಾಗುವದು. ಅಷ್ಟೇ ಅಲ್ಲದೆ ಪ್ರತಿಪಕ್ಷ ನಾಯಕರ ಜೊತೆಗೆ ಮಾತನಾಡಿ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುತ್ತದೆ ಎಂದು ಭರವಸೆ ನೀಡಿದರು.

ಇತ್ತೀಚಿಗೆ ಕಳೆದ 10 ದಿನಗಳ ಕಾಲ ನಡೆದ ಅಧಿವೇಶನದಲ್ಲಿ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದ್ದು. 300 ಪ್ರಶೆಗಳ ಪೈಕಿ 7 ಪ್ಶ್ನೆಗಳು ಹೊರತುಪಡಿಸಿ ಉಳಿದೆಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ಹೀಗಾಗಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುವದರಿಂದ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚಿಸಲು ಬೆಳಗಾವಿ ಅಧಿವೇಶನ ಸಹಾಕಾರಿ ಆಗಲಿದೆ.

ಮಹಾದಾಯಿ ಕಾಮಗಾರಿ ಕುರಿತು ಸಿಎಂ ಜೊತೆ ಚರ್ಚೆ

ಇನ್ನೂ ಮಹದಾಯಿ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮಹದಾಯಿ ಕಾಮಗಾರಿ ಕೂಡಲೇ ಪ್ರಾರಂಭವಾಗಬೇಕು. ಈ ಬಗ್ಗೆ ಇದುವರೆಗೂ ನಾನು ಸಿಎಂ ಜೊತೆಗೆ ಮಾತನಾಡಿಲ್ಲ. ಶೀಘ್ರವೇ ಈ ಕುರಿತು ಮಾತನಾಡಿ ಸಲಹೆ ಸೂಚನೆಗಳನ್ನು ನೀಡುತ್ತೇನೆ ಎಂದು ತಿಳಿಸಿದರು.

ಹಳೆಯ ಪಿಂಚನಿ ಯೋಜನೆ ಜಾರಿಗೆ ತಂದರೆ ಸರ್ಕಾರಿ ನೌಕರರಿಗೆ ಅನುಕೂಲವಾಗುತ್ತೆ:

ಇನ್ನೂ ಕೇಂದ್ರ ಸರಕಾರದ ರಾಷ್ಟ್ರೀಯ ಪೆನ್ಷನ್ ಯೋಜನೆಯ ಕುರಿತು ಮಾತನಾಡಿದ ಅವರು, ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ ಜಾರಿಗೆ ತಂದರೆ ಅವರ ಕುಟುಂಬಕ್ಕೆ ಅನುಕೂಲವಾಗುತ್ತದೆ. ಪಶ್ಚಿಮ ಬಂಗಾಳ ಹಾಗೂ ತ್ರಿಪುರಾ ರಾಜ್ಯದಲ್ಲಿ ಈ ಯೋಜನೆಯನ್ನು ಜಾರಿ ಮಾಡಿಲಾಗಿದೆ. ತೆಲಂಗಾಣ, ಆಂಧ್ರಪ್ರದೇಶ ಮತ್ತು ಕೇರಳ ಸರ್ಕಾರ ಎನ್ ಪಿಎಸ್ ನಲ್ಲಿ ಬದಲಾವಣೆ ತರಲು ಮುಂದಾಗಿವೆ. ಅದೇ ರೀತಿ ನಮ್ಮ ಸರಕಾರವು ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತಂದರೆ ಒಳ್ಳೆಯದಾಗುತ್ತದೆ. ಈ ಹಿಂದೆ ಸಿದ್ದರಾಮಯ್ಯರವರ ಸರಕಾರ ಇದ್ದಾಗ ನಾನು ಎನ್ ಪಿಎಸ್ ಕುರಿತು ಮಾತನಾಡಿದ್ದೆ, ಅವರು ಸರಕಾರಕ್ಕೆ ಆರ್ಥಿಕ ಹೊರೆ ಆಗುತ್ತದೆ ಎಂದು ಜಾರಿಗೆ ತರಲು ಆಗುವುದಿಲ್ಲ ಎಂದು ಹೇಳಿದ್ದರು. ಸದ್ಯ ಬಿಜೆಪಿ ಸರ್ಕಾರ ಇದೆ. ಹಾಗಾಗಿ ಮುಖ್ಯಮಂತ್ರಿ ಯವರ ಜೊತೆ ಮಾತನಾಡುವೆ. ಆದರೆ ಯೋಜನೆ ಜಾರಿ ಮಾಡುವುದು ಬಿಡುವುದು ಸರ್ಕಾರದ ವಿವೇಚನೆಗೆ ಬಿಟ್ಟಿದ್ದು ಎಂದರು.

ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಂತ್ರಿಗಳ ದಾರಿ ತಪ್ಪಿಸುತ್ತಿದ್ದಾರೆ:

ಇನ್ನೂ ಶಿಕ್ಷಣ ಇಲಾಖೆಯ ಕುರಿತು ಮಾತನಾಡಿದ ಅವರು, ಕಳೆದ ನಾಲ್ಕೈದು ವರ್ಷಗಳಿಂದ ಶಿಕ್ಷಣ ಇಲಾಖೆ ಸಂಪೂರ್ಣ ದಾರಿ ತಪ್ಪಿಹೋಗಿದೆ. ಮಂತ್ರಿಗಳಿಗೆ ಅಧಿಕಾರಿಗಳು ಮಿಸಗೈಡ್ ಮಾಡುತ್ತಿದ್ದಾರೆ. ಅಧಿಕಾರಿಗಳು ಹೇಳಿದ್ದನ್ನು ಮಂತ್ರಿಗಳು ಹೇಳುತ್ತಾರೆ. ಸರಕಾರ ಕೂಡಲೇ ಶಿಕ್ಷಕರ ನೇಮಕಾತಿ ಮಾಡಬೇಕು. ಶಿಕ್ಷಕರ ಸಮಸ್ಯೆಗಳು ಬೆಳೆಯುತ್ತಲೆ ಹೋಗುತ್ತಿವೆ. ಅಷ್ಟೇಯಲ್ಲ ಬೆಳಗಾವಿ ವಿಭಾಗದ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ ಸಿದ್ದಲಿಂಗಯ್ಯ ನವರನ್ನು ವರ್ಗಾವಣೆ ಮಾಡಿ ಎಂದು ನಾಲ್ಕು ಜಿಲ್ಲೆಯ ಸಚಿವರು ಮುಖ್ಯಮಂತ್ರಿಗಳಿಗೆ ಹೇಳಿದ್ದಾರೆ. ಇಂತಹ ಅಧಿಕಾರಿಗಳಿಂದ ಶಿಕ್ಷಕರಿಗೆ ಅನ್ಯಾಯವಾಗುತ್ತಿದೆ. ಆದರೂ ವರ್ಗಾವಣೆ ಮಾಡುತ್ತಿಲ್ಲ ಎಂದು ಕಿಡಿಕಾರಿದರು.

Related Articles

Leave a Reply

Your email address will not be published.

Back to top button