Latest

ಕಟೀಲ್ ಹೇಳಿಕೆ ಸರಿಯಲ್ಲ: ರಾಹುಲ್ ಗಾಂಧಿ ಬಗ್ಗೆ ಗೌರವವಿದೆ: ಯಡಿಯೂರಪ್ಪ

ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಡ್ರಗ್ಸ್ ಪೆಡ್ಲರ್ ಎಂದು ನಳಿನ್ ಕುಮಾರ್ ಕಟೀಲ್ ಹೇಳಿರುವುದಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದು, ಆ ರೀತಿ ಅಗೌರವದಿಂದ ಯಾರೂ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ.

ಸಿಂದಗಿ ಭೇಟಿ ವೇಳೆ ಯಡಿಯೂರಪ್ಪ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರೂ ಯಾರ ಬಗ್ಗೆಯೂ ಅಗೌರವದಿಂದ ಮಾತನಾಡಬಾರದು. ರಾಹುಲ್ ಗಾಂಧಿ ಬಗ್ಗೆ ಗೌರವವಿದೆ ಎಂದರು.

ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ಅನಗತ್ಯವಾಗಿ ಆರೆಸ್ಸೆಸ್ ಕುರಿತಾಗಿ ಮಾತನಾಡುತ್ತಿದ್ದಾರೆ. ಇದರಿಂದ ಅವರಿಗೆ ಯಾವುದೇ ಲಾಭವಿಲ್ಲ, ಜನ ಉಪಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

Related Articles

Leave a Reply

Your email address will not be published. Required fields are marked *

Back to top button