Uncategorized
ಕೊಡಗಿನಲ್ಲಿ ಮತ್ತೆ ಕೊರೊನಾ ಸ್ಪೋಟ: ವಸತಿ ಶಾಲೆಯ 21 ಮಕ್ಕಳಲ್ಲಿ ಕೋವಿಡ್ ಪಾಸಿಟಿವ್
ಕೊಡಗು : ಕೊಡಗು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಕಡಿಮೆಯಾಗಿ ಶಾಲಾ ಕಾಲೇಜುಗಳು ಮತ್ತು 1ರಿಂದ 5ನೇ ತರಗತಿಗಳು ಆರಂಭವಾಗಿದ್ದವು. ಆದರೇ ಜಿಲ್ಲೆಯಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದ್ದು, ಮಡಿಕೇರಿಯ ಗಾಳಿಬೀಡು ಸಮೀಪದ ನವೋದಯದ ವಸತಿ ಶಾಲೆಯಲ್ಲಿ 21 ಮಕ್ಕಳಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ.
ಒಟ್ಟು 270 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ 21 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಧೃಡವಾಗಿದೆ ಎನ್ನಲಾಗಿದೆ. ಕೊರೊನಾ ಪಾಸಿಟಿವ್ ಧೃಡವಾದ ಹಿನ್ನೆಲೆ 21 ಮಕ್ಕಳನ್ನು ಮಡಿಕೇರಿ ಮೆಡಿಕಲ್ ಕಾಲೇಜಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ಒಂದು ವಾರದಿಂದ ಮಕ್ಕಳಲ್ಲಿ ಕೆಮ್ಮು, ಜ್ವರ ಕಾಣಿಸಿಕೊಂಡಿತ್ತು, ಈ ಹಿನ್ನೆಲೆ ಮಕ್ಕಳಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿದೆ.