Uncategorized

ಏರ್‌ಪೋರ್ಟ್‌ ರಸ್ತೆಯಲ್ಲಿ ವೀಲ್ಹಿಂಗ್‌ ಅಬ್ಬರ: ದ್ವಿಚಕ್ರ ವಾಹನ ಸಮೇತ ಒಬ್ಬ ವಶಕ್ಕೆ

ದೇವನಹಳ್ಳಿ: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಪಡ್ಡೆ ಹುಡುಗರ ವೀಲ್ಹಿಂಗ್ ಹಾವಳಿ ಹೆಚ್ಚಾಗಿದ್ದು, ಸ್ಥಳೀಯ ನಾಗರಿಕರು ತೊಂದರೆಗೆ ಒಳಗಾಗಿದ್ದಾರೆ. ಇಂದು ಬೆಳಿಗ್ಗೆ ವೀಲಿಂಗ್ ಮಾಡುತ್ತಿದ್ದ ಪುಂಡರಲ್ಲಿ ಒಬ್ಬನನ್ನು ಏರ್ಪೋರ್ಟ್ ಪೋಲೀಸರು ಬೈಕ್ ಸಮೇತ ವಶಕ್ಕೆ ಪಡೆದಿದ್ದಾರೆ.

ದೇವನಹಳ್ಳಿ ಹೊರವಲಯದ ಬೆಂಗಳೂರು ಹೈದರಾಬಾದ್ ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಾ ಹೆದ್ದಾರಿಯಲ್ಲಿ ಸಂಚರಿಸುತಿದ್ದ ಇತರ ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದ ಬಗ್ಗೆ ವಾಹನ ಸವಾರರು ಠಾಣೆಗೆ ಮಾಹಿತಿ ನೀಡುತ್ತಿದ್ದಂತೆ ವೀಲಿಂಗ್ ಮಾಡುತ್ತಿದ್ದ ಯುವಕರಲ್ಲಿ ಒಬ್ಬನನ್ನು ಏರ್ಪೋರ್ಟ್ ಸಂಚಾರಿ ಪೋಲೀಸರು ದ್ವಿಚಕ್ರ ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ.

ಹೆದ್ದಾರಿಯಲ್ಲಿ ವೀಲಿಂಗ್ ಮಾಡುತ್ತಿದ್ದಂತೆ ಹಿಂದಿನ ಸೀಟಿನಿಂದ ಮುಂದಿನ ಸೀಟಿಗೆ ಬಂದು ವೀಲಿಂಗ್ ಮಾಡುತ್ತಿದ್ದ ಯುವಕರ ಬಗ್ಗೆ ಕಿರಿಕಿರಿ ಅನುಭವಿಸಿದ ಇತರ ವಾಹನ ಸವಾರರು ಯುವಕರ ಆಟವನ್ನು ಮೊಬೈಲ್ ನಲ್ಲಿ ಚಿತ್ರಿಸಿ ಪೋಲೀಸರಿಗೆ ತಲುಪಿಸುತ್ತಿದ್ದಂತೆ ತಕ್ಷಣ ಕಾರ್ಯಪ್ರವೃತ್ತರಾದ ಸಂಚಾರಿ ಪೋಲಿಸರು ವೀಲಿಂಗ್ ಪುಂಡರಲ್ಲಿ ಒಬ್ಬನನ್ನು ಬಂಧಿಸಿದ್ದಾರೆ.

ಪ್ರಮುಖ ರಸ್ತೆಗಳಲ್ಲಿ ವೀಲ್ಹಿಂಗ್‌ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಹೊರತಾಗಿಯೂ ಅಲ್ಲಲ್ಲಿ ವೀಲ್ಹಿಂಗ್‌ ಹಾವಳಿ ಮುಂದುವರಿದಿದೆ. ಇದರ ಬಗ್ಗೆ ಪೊಲೀಸರಿಗೆ ದೂರು ನೀಡಿದರೆ ತಕ್ಷಣವೇ ಕ್ರಮ ಕೈಗೊಳ್ಳಲಾಗುವುದು ಎಂದು ಪೋಲಿಸರು ತಿಳಿಸಿದ್ದಾರೆ.

Related Articles

Leave a Reply

Your email address will not be published.

Back to top button