Uncategorized

ಕಡೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ

ಚಿಕ್ಕಮಗಳೂರು: ಭೂಖಾತೆ ಬದಲಾವಣೆಗೆ ಲಂಚ ಪಡೆಯುತ್ತಿದ್ದ ಕಡೂರಿನ ಪುರಸಭೆ ಮುಖ್ಯಾಧಿಕಾರಿ ಮಂಜುನಾಥ್ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಜಮೀನಿಗೆ ಖಾತೆ ಮಾಡಿಕೊಡಲು ತಾವರೆಕೆರೆಯ ರಘು ಎಂಬವರಿಂದ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ಸಂದರ್ಭ ದಾಳಿ ನಡೆದಿದೆ. ತಂದೆಯಿಂದ ಬಳುವಳಿಯಾಗಿ ಬಂದಿದ್ದ ಜಮೀನನ್ನು ರಘು ತನ್ನ ಪತ್ನಿ ಲತಾ ಹೆಸರಿಗೆ ಖಾತೆ ಮಾಡಿಕೊಡುವಂತೆ ಮನವಿ ಸಲ್ಲಿಸಿದ್ದು ಇದಕ್ಕೆ 25 ಸಾವಿರ ರೂ.ಗಳಿಗೆ ಮುಖ್ಯಾಧಿಕಾರಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಮುಂಗಡವಾಗಿ 10 ಸಾವಿರ ರೂ.ಗಳನ್ನು ಮುಖ್ಯಾಧಿಕಾರಿ ಮಂಜುನಾಥ್ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದೆ. ಎಸಿಬಿ ಡಿವೈಎಸ್ಪಿ ಗೀತಾ ಇನ್ಸ್ಪೆಕ್ಟರ್ಗಳಾದ ಮಂಜುನಾಥ್, ಅನಿಲ್ ರಾಥೋಡ್ ದಾಳಿಯ ನೇತೃತ್ವ ವಹಿಸಿದ್ದರು.

Related Articles

Leave a Reply

Your email address will not be published.

Back to top button