Uncategorized

ಕೆಎಸ್​ಆರ್​ಟಿಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ

ಚಿಕ್ಕಮಗಳೂರು : ರಸ್ತೆ ನಡುವೆ ಆಟೋ ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಕೆಎಸ್ ಆರ್ ಟಿ ಸಿ ಬಸ್ ಕಂಡಕ್ಟರ್ ಮೇಲೆ ರೊಚ್ಚಿಗೆದ್ದು ಆಟೋ ಚಾಲಕರು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ನಗರದ ತೊಗರಿಹಂಕಲ್ ವೃತ್ತದ ಬಳಿ ರಸ್ತೆ ಮಧ್ಯೆ ಆಟೋ ನಿಲ್ಲಿಸಿದ್ದನ್ನ ಪ್ರಶ್ನಿಸಿದ್ದಕ್ಕೆ ಕೆಲ ಆಟೋ ಚಾಲಕರು ಹಲ್ಲೆ ನಡೆಸಿದ್ದಾರೆ. ಕಂಡಕ್ಟರ್ ಚಪ್ಪಲಿ ಕಾಲಲ್ಲಿ ಒದ್ದ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ.

ಬಸ್ ಕಂಡಕ್ಟರ್ ಚಿಕ್ಕಮಗಳೂರು ನಗರ ಠಾಣೆಗೆ ದೂರು ನೀಡಿದ್ದಾರೆ.

Related Articles

Leave a Reply

Your email address will not be published.

Back to top button