Uncategorized

ಬಸವರಾಜ ಬೊಮ್ಮಾಯಿ‌ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ : ಈಗಾಗಲೇ ರಾಜ್ಯದ ಮುಖ್ಯಮಂತ್ರಿಯಾಗಿರುವ ಬಸವರಾಜ ಬೊಮ್ಮಾಯಿ‌ ಅವರು ಉತ್ತಮವಾದ ಆಡಳಿತ ನೀಡುತ್ತಿದ್ದಾರೆ. ‌ಅವರು ಉತ್ತಮ ಯೋಜನೆಗಳನ್ನು ರಾಜ್ಯದಲ್ಲಿ ತರುವುದರ ಮೂಲಕ ಜನಸ್ನೇಹಿ ಆಡಳಿತವನ್ನು ನೀಡುತ್ತಿದ್ದಾರೆ. ಹಾಗಾಗಿ ಅವರು ರಾಜ್ಯದಲ್ಲಿ ಪೂರ್ಣವಧಿ ಮುಖ್ಯಮತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರೇ ಇರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು. ಈಗ ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಖ್ಯಂಮತ್ರಿಯಾಗಿ ನೂರು ದಿನಗಳನ್ನು ಪೂರೈಸಿ, ಉತ್ತಮ ಆಡಳಿತ ನೀಡುತ್ತಿದ್ದಾರೆ. ಉಳಿದಿರು ಅವಧಿಯನ್ನು ಕೂಡಾ ಬೊಮ್ಮಾಯಿ ಅವರೇ ಪೂರ್ಣ ಮಾಡುತ್ತಾರೆ, ಅದರಲ್ಲಿ ಯಾವುದೇ ಸಂದೇಹ ಬೇಡ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಪಕ್ಷವನ್ನು‌ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿಯೇ ನಮ್ಮ ರಾಜ್ಯದ ನಾಯಕರು ಈಗಾಗಲೇ ತಮ್ಮ ಕೆಲಸವನ್ನು ಮಾಡುತ್ತಿದ್ದಾರೆ ಎಂದರು.

ಈ ಹಿಂದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಆಗಿದ್ದರಿಂದ ದೇಶದಲ್ಲಿ ಪೆಟ್ರೋಲ್ ಡಿಸೇಲ್ ಬೆಲೆ ಡಿ ಕಂಟ್ರೋಲ್ ಆಗಿತ್ತು.‌ ಈಗಷ್ಟೇ ಏನೂ ಬೆಳೆ ಏರಿಕೆಯಾಗಿಲ್ಲ, ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಬೆಲೆ ಏರಿಕೆ ಆಗಿತ್ತು. ಈಗ ನಮ್ಮ ಸರ್ಕಾರ ಸಾರ್ವಜನಿಕರಿಗೆ ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆಯಿಂದಾಗಿ ಆಗುತ್ತಿರುವ, ತೊಂದರೆ ತಪ್ಪಿಸು ದೃಷ್ಟಿಯಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆಯನ್ನು ಇಳಿಸಲು ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಂಡಿವೆ. ಇದರಿಂದಾಗಿ ನಮ್ಮ ರಾಜ್ಯದಲ್ಲಿ 17 ರೂಪಾಯಿ ಡಿಸೇಲ್ ಹಾಗೂ 12 ರೂಪಾಯಿ ಪೆಟ್ರೋಲ್ ಬೆಲೆಯು ಇಳಿಕೆಯಾಗಿದೆ. ಇದರಿಂದಾಗಿ ಜನತೆಗೆ ಒಳ್ಳೆಯದು ಆಗುತ್ತೆ ಎಂದು ಹೇಳಿದರು.

Related Articles

Leave a Reply

Your email address will not be published.

Back to top button