Uncategorized

ರವೀಂದ್ರನಾಥ್ ಟ್ಯಾಗೋರ್ ಕಡಲತೀರ ಸ್ವಚ್ಛಗೊಳಿಸಿದ ಅಧಿಕಾರಿಗಳು

ಕಾರವಾರ : ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 153 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಉತ್ತರ ಕನ್ನಡದ ರವೀಂದ್ರನಾಥ್ ಟ್ಯಾಗೋರ್ ಕಡಲ ತೀರಕ್ಕೆ ಖುದ್ದು ಜಿಲ್ಲಾಧಿಕಾರಿ,ಪೊಲೀಸ್ ವರಿಷ್ಠಾಧಿಕಾರಿ,ಇನ್ನಿತರ ಅಧಿಕಾರಿಗಳು, ಜನಪ್ರತಿನಿಧಿಗಳು ಸೇರಿದಂತೆ ನೂರಾರು ಮಂದಿ ಭೇಟಿ ನೀಡಿ ಸ್ವಚ್ಛಗೊಳಿಸಿದರು.

ನಗರಸಭೆ ವತಿಯಿಂದ ಆಯೋಜಿಸಿದ್ದ ಗಾಂಧಿ ಜಯಂತಿ ಹಾಗೂ ಸ್ವಚ್ಛತಾ ಕಾರ್ಯಕ್ರಮಕ್ಕೆ ನಗರಸಭೆ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಚಾಲನೆ ನೀಡಿದರು.ನಂತರ ಟ್ಯಾಗೋರ್ ಕಡಲ ತೀರದುದ್ದಕ್ಕೂ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲ್,ಚೀಲ,ಬಟ್ಟೆ,ಬಲೆ ಸೇರಿದಂತೆ ಇನ್ನಿತರ ತ್ಯಾಜ್ಯಗಳನ್ನು ಆಯ್ದು ಸ್ವಚ್ಛಗೊಳಿಸಲಾಯಿತು.

ಈ ವೇಳೆ ನಗರಸಭೆ ಅಧ್ಯಕ್ಷ ನಿತಿನ್ ಪಿಕಳೆ ಸೇರಿದಂತೆ ಸದಸ್ಯರು,ಜಿಲ್ಲಾ ಪಂಚಾಯತ್​ ಕಾರ್ಯನಿರ್ವಾಹಕ ಅಧಿಕಾರಿ ಪ್ರಿಯಾಂಗ ಎಂ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.ಜೊತೆಗೆ ಸ್ವಚ್ಛತಾ ಕಾರ್ಯಕ್ಕೆ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು,ಎನ್​ಸಿಸಿ, ಪೊಲೀಸರು,ಸೇರಿದಂತೆ ವಿವಿಧ ಸಂಘಟನೆಗಳ ಕಾರ್ಯಕರ್ತರು ಕೈ ಜೋಡಿಸಿದರು.

Related Articles

Leave a Reply

Your email address will not be published.

Back to top button