Uncategorized

ಬಿಜೆಪಿ ದಲಿತ ನಾಯಕರ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಬಾಗಲಕೋಟೆ: ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರಿದ್ದಾರೆ ಎಂದು ಹೇಳಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಾಗಲಕೋಟೆ ಬಸವೇಶ್ವರ ವೃತ್ತದದಲ್ಲಿ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಹೇಳಿಕೆ ಖಂಡಿಸಿದರು. ಬಾಗಲಕೋಟೆ ಜಿಲ್ಲಾ ಬಿಜೆಪಿ ಎಸ್ ಸಿ ಎಸ್ಪಿ ಮೋರ್ಚಾ ಘಟಕದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾ‌ಸಕ ವೀರಣ್ಣ ಚರಂತಿಮಠ ಮಾತನಾಡಿ, ಸಿದ್ದರಾಮಯ್ಯ ಮಾನಸಿಕ ಸ್ಥಿಮಿತ ಕಳೆದುಕೊಂಡು ಮಾತನಾಡುತ್ತಿದ್ದಾರೆ. ತಾವೊಬ್ಬರು ಮುಖ್ಯಮಂತ್ರಿಯಾಗಿದ್ದವರು ಯಾವ ರೀತಿ ಮಾತನಾಡಬೇಕು ಎನ್ನುವ ಕನಿಷ್ಠ ಸೌಜನ್ಯ ಇಲ್ಲ. ಅಹಿಂದ ಎಂದು ಕಟ್ಟಿಕೊಂಡು ಹೋರಾಟ ಮಾಡಿದವರು ದಲಿತರ ಬಗ್ಗೆ ಈ ರೀತಿ ಮಾತನಾಡಿದ್ದು ಸರಿಯಲ್ಲ ಎಂದರು.

ದಲಿತ ನಾಯಕರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಾರೆ ಎನ್ನುತ್ತಾರೆ. ಹಾಗಾದರೆ ಕಾಂಗ್ರೆಸ್ ನಲ್ಲಿ ದಲಿತರ ಸ್ಥಿತಿಯೇನು.ಏನು ಕೆಲಸ ಮಾಡ್ತಾರೆ ಎಂದು ಪ್ರಶ್ನಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಪಿಎಚ್ ಪೂಜಾರ್, ವಿಧಾನಪರಿಷತ್ ಮಾಜಿ ಸದಸ್ಯ ನಾರಾಯಣಸಾ ಭಾಂಡಗೆ,ನಗರಸಭೆ ಉಪಾಧ್ಯಕ್ಷ ಬಸವರಾಜ ಅವರಾದಿ,ದಲಿತ ಮುಖಂಡ ಅಶೋಕ್ ಲಿಂಬಾವಳಿ ಸೇರಿದಂತೆ ಅನೇಕ ಕಾರ್ಯಕರ್ತರು ಭಾಗಿಯಾಗಿದ್ದರು.

Related Articles

Leave a Reply

Your email address will not be published.

Back to top button