Uncategorized

ಸಿದ್ದರಾಮಯ್ಯ ಹೇಳಿಕೆಗೆ ಖಂಡನೆ; ಬಿಜೆಪಿ ಎಸ್ಸಿ ಮೋರ್ಚಾದಿಂದ ಪ್ರತಿಭಟನೆ

ಚಿಕ್ಕಮಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ದಲಿತ ವಿರೋಧಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಬಿಜೆಪಿ ಎಸ್ಸಿ ಮೋರ್ಚಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನಗರದ ತಾಲೂಕು ಕಚೇರಿ ಆವರಣದಿಂದ ಎಂಜಿ ರಸ್ತೆ ಮೂಲಕ ಆಜಾದ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿದರು.

ಎಸ್ಸಿ ಮೋರ್ಚಾ ರಾಜ್ಯ ಸಮಿತಿ ಸದಸ್ಯ ಮಹದೇವಪ್ಪ ಮಾತನಾಡಿ, ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ದಲಿತರು ಹೊಟ್ಟೆಪಾಡಿಗಾಗಿ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ಅವಹೇಳನಕಾರಿ ಹೇಳಿಕೆಯನ್ನು ಸಿದ್ದರಾಮಯ್ಯ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಜೆಡಿಎಸ್ನಿಂದ ಕಾಂಗ್ರೆಸ್ ಗೆ ಏಕೆ ಬಂದರು ಎನ್ನುವುದಕ್ಕೆ ಮೊದಲು ಉತ್ತರ ಕೊಡಲಿ ಎಂದರು.

ಎಸ್ಸಿ ಮೋರ್ಚಾ ಜಿಲಾಧ್ಯಕ್ಷ ವೆಂಕಟೇಶ್ ಇಡೀ ದೇಶದಲ್ಲಿ ದೀನ ದಲಿತರನ್ನು ಕೇವಲ ಮತಬ್ಯಾಂಕ್ ಮಾಡಿಕೊಂಡರೇ ಹೊರತು ಯಾವುದೇ ರೀತಿ ಅಧಿಕಾರ ನೀಡಲು ಮುಂದಾಗಲಿಲ್ಲ ಎಂದು ಆರೋಪಿಸಿದರು.

ಜಿಪಂ ಮಾಜಿ ಸದಸ್ಯ ಬಣಕಲ್ ಶಾಮಣ್ಣ ಮಾತನಾಡಿ, ಪಂಜಾಬಿನಲ್ಲಿ ಈಗ ಓಟಿಗಾಗಿ ಕೇವಲ ನಾಲ್ಕು ತಿಂಗಳ ಅವಧಿಗೆ ಓರ್ವ ಎಸ್ಸಿ ಮುಖಂಡರನ್ನು ಕಾಂಗ್ರೆಸ್ ಸಿಎಂ ಮಾಡಿದೆ ಇದರ ಹಿಂದಿರುವ ಉದ್ದೇಶ ಎಲ್ಲರಿಗೂ ಗೊತ್ತಿದೆ ಎಂದರು.

Related Articles

Leave a Reply

Your email address will not be published.

Back to top button