Uncategorized

ಫತ್ವಾ ಹೊರಡಿಸುವುದು ದೇಶದ್ರೋಹದ ಕೆಲಸ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಚಿಕ್ಕಮಗಳೂರು: ಫತ್ವಾ ಹೊರಡಿಸುವುದು ದೇಶದ್ರೋಹದ ಕೆಲಸವಾಗಿದ್ದು, ಇದರ ವಿರುದ್ಧ ತಕ್ಷಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ, ಗೃಹ ಸಚಿವರಿಗೆ ವಿನಂತಿ ಮಾಡುವುದಾಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

ಉಡುಪಿಯ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಸಂಬಂಧಿಸಿದ ಪ್ರಕರಣದ ಬಗ್ಗೆ ಅವರು ಪ್ರತಿಕ್ರಿಯಿಸಿ, ಫತ್ವಾ, ಆಜ್ಞೆ ಹೊರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ. ಒಂದು ಕೋಮಿನವರು ಇನ್ನೊಂದು ಕೋಮಿನವರ ಬಳಿ ವ್ಯಾಪಾರಕ್ಕೆ ಹೋಗಬಾರದು ಎಂದು ಫತ್ವಾ ಏನಾದರೂ ಹೊರಡಿಸಿದ್ದರೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಗಂಗೊಳ್ಳಿಯಲ್ಲಿ ನಡೆದಿರುವ ಇಂತಹ ಘಟನೆ ಇನ್ನೆಲ್ಲೂ ಮರುಕಳಿಸಬಾರದು. ಕೋಮು ಸೌಹಾರ್ದಕ್ಕೆ ಧಕ್ಕೆ ತರುವುದು ಸರಿಯಲ್ಲ ಎಂದು ಪ್ರತಿಪಾದಿಸಿದ್ದಾರೆ.

ಬಿಜೆಪಿ ಸರ್ಕಾರ ಇರುವಾಗಲೇ ಇಂತಹ ಷಡ್ಯಂತ್ರ ನಿರಂತರವಾಗಿ ದೇಶದ ಬೇರೆ ಬೇರೆ ಭಾಗಗಳಲ್ಲಿ ನಡೆಸುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಇದಕ್ಕೆ ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದರು.

ಉತ್ತರ ಪ್ರದೇಶದಲ್ಲಿ ರೈತರ ಮೇಲೆ ಟ್ರಾಕ್ಟರ್ ಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಈಗಾಗಲೇ ಸಮಿತಿಯನ್ನು ರಚಿಸಲಾಗಿದೆ. ಪ್ರಕರಣದ ಸಮಗ್ರ ತನಿಖೆ ನಡೆಯಬೇಕು ಎಂದ ಅವರು ಈ ಘಟನೆಯ ಹಿಂದೆಯೂ ವ್ಯವಸ್ಥಿತ ಷಡ್ಯಂತ್ರ ನಡೆದಿದೆ ಎಂದು ಶಂಕೆ ವ್ಯಕ್ತಪಡಿಸಿದರು

Related Articles

Leave a Reply

Your email address will not be published. Required fields are marked *

Back to top button