Uncategorized

ವಿವಿಧ ವಸತಿ ನಿಲಯಗಳಲ್ಲಿ ಸ್ವಚ್ಛತಾ ಆಂದೋಲನ

ಬಾಗಲಕೋಟೆ : ಜಿಲ್ಲಾಡಳಿತದ ವತಿಯಿಂದ ಮಹಾತ್ಮ ಗಾಂಧಿ ಹಾಗೂ ಲಾಲಬಹದ್ದೂರ ಶಾಸ್ತ್ರೀ ಅವರ ಜಯಂತೋತ್ಸವ ಅಂಗವಾಗಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಶಾಸಕ ವೀರಣ್ಣ ಚರಂತಿಮಠ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿ.ಪಂ ಸಿಇಓ ಟಿ.ಭೂಬಾಲನ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಗಾಂಧೀ ಮತ್ತು ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಂಟಿ ಕೃಷಿ ನಿರ್ದೇಶಕಿ ಚೇತನಾ ಪಾಟೀಲ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಉಕ್ಕಲಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಖಾದಿ ಉತ್ಪನ್ನಗಳ ಮಾರಾಟ

ಗಾಂಧಿ ಜಯಂತಿ ಅಂಗವಾಗಿ ಜಿಲ್ಲಾಡಳಿತ ಭವನದಲ್ಲಿ ಆಯೋಜಿಸಿರುವ ವಿಶೇಷ ರಿಯಾಯಿತಿ ದರದ ಖಾದಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಯನ್ನು ಶಾಸಕ ವೀರಣ್ಣ ಚರಂತಿಮಠ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಖಾದಿ ಉತ್ಪನ್ನಗಳನ್ನು ವೀಕ್ಷಿಸುವದರ ಜೊತೆಗೆ ಖರೀದಿ ಸಹ ಮಾಡಿದರು.

ವಸತಿ ನಿಲಯಗಳಲ್ಲಿ ಸ್ವಚ್ಛತಾ ಆಂದೋಲನ

ಗಾಂಧೀ ಜಯಂತಿ ಅಂಗವಾಗಿ ನವನಗರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪನಿರ್ದೇಶಕ ಶಿವಾನಂದ ಕುಂಬಾರ ಅವರು ಗಾಂಧೀ ಮತ್ತು ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸುವದರೊಂದಿಗೆ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಹೇಶ ಪೋತದಾರರ ನೇತೃತ್ವದಲ್ಲಿ ವಿದ್ಯಾರ್ಥಿಗಳೊಂದಿಗೆ ಸ್ವಚ್ಛತೆಯ ಕಾರ್ಯ ನಡೆಯಿತು. ನಂತರ ನಗರದಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಪರಿಶಿಷ್ಟ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳಿಗೆ ತೆರಳಿ ವಿದ್ಯಾರ್ಥಿಗಳೊಂದಿಗೆ ಅಧಿಕಾರಿಗಳು ಸ್ವಚ್ಛತಾ ಕಾರ್ಯ ಕೈಗೊಳ್ಳುವದರ ಜೊತೆಗೆ ಸಸಿಗಳನ್ನು ನೆಡಲಾಯಿತು.

ಸ್ವಚ್ಛತಾ ಕಾರ್ಯಕ್ರಮದಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಉಪ ಅಧೀಕ್ಷಕ ಆರ್.ಎಸ್.ರೊಟ್ಟಿ ಹಾಗೂ ಸಿಬ್ಬಂದಿ, ಬಾಗಲಕೋಟೆ ತಾಲೂಕಿನ ಸಹಾಯಕ ನಿರ್ದೇಶಕಿ ಜಯಶ್ರೀ ಮೇತ್ರಿ ಹಾಗೂ ಸಿಬ್ಬಂದಿಯವರು, ಮುರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲರು, ವಸತಿನಿಲಯಗಳ ನಿಲಯಪಾಲಕರು ಮತ್ತು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published.

Back to top button