Uncategorized

ಸಿಂದಗಿ ಉಪ ಚುನಾವಣೆಯಲ್ಲಿ ಸೋತು ಗೆದ್ದಿದ್ದೇವೆ: ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಹಾನಗಲ್ ನಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು ಸಿಂದಗಿಯಲ್ಲಿ ಸೋತು ಗೆದ್ದಿದ್ದೇವೆ ಎಂದು ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರೊಂದಿಗೆ ಮಾತನಾಡಿದ ಅವರು ಸಿಂದಗಿ, ಹಾನಗಲ್ ಎರಡು ಕ್ಷೇತ್ರಗಳಲ್ಲೂ ಗೆಲ್ಲುವ ನಿರೀಕ್ಷೆ ಇತ್ತು. ಆದರೂ ಹಾನಗಲ್​​ನಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದೆ‌, ಸಿಂದಗಿಯಲ್ಲಿ ಕಳೆದ ಬಾರಿ ಕಾಂಗ್ರೆಸ್ ಪಕ್ಷ ಮೂರನೇ ಸ್ಥಾನಕ್ಕೆ ಬಂದಿತ್ತು. ಅಲ್ಲಿ ಜೆಡಿಎಸ್ ಪಕ್ಷ ಗೆಲುವು ಸಾಧಿಸಿತ್ತು ಆದರೆ ಈ ಬಾರಿ ಮೂರನೇ ಸ್ಥಾನದಲ್ಲಿದ್ದ ಕಾಂಗ್ರೆಸ್ ಪಕ್ಷ ಎರಡನೇ ಸ್ಥಾನಕ್ಕೆ ಬಂದಿದೆ‌ ಎಂದರು.

ಆ ಕ್ಷೇತ್ರದ ಮತದಾರರು ಸಹ ಬದಲಾವಣೆ ಬಯಸಿದ್ದಾರೆ, ಮುಂದಿನ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನತೆಯ ಒಲವು ವ್ಯಕ್ತಪಡಿಸಿದ್ದಾರೆ. ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಹಗಲು ರಾತ್ರಿ ಎನ್ನದೆ ಶ್ರಮವಹಿಸಿದ್ದಾರೆ ಎಂದು ತಿಳಿಸಿದರು.

ಈ ಗೆಲುವಿನ ಕೀರ್ತಿ ಕ್ಷೇತ್ರದ ಜನತೆ ಹಾಗೂ ಕಾರ್ಯಕರ್ತರುಗಳಿಗೆ ಸಲ್ಲಬೇಕು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳಿಂದ ಜನತೆ ಬದಲಾವಣೆ ಬಯಸಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *

Back to top button