Uncategorized

ಹರ್ನಿಯಾ ಶಸ್ತ್ರಚಿಕಿತ್ಸೆ ವೇಳೆ ರೋಗಿಯ ಖಾಸಗಿ ಅಂಗಕ್ಕೆ ಗಾಯ; ದೂರು ದಾಖಲು

ಚಿಕ್ಕಮಗಳೂರು: ರೋಗಿಯೋರ್ವರ ಹರ್ನಿಯಾ ಶಸ್ತ್ರಚಿಕಿತ್ಸೆ ವೇಳೆ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ಖಾಸಗಿ ಅಂಗಕ್ಕೆ ಗಾಯ ಮಾಡಿರುವ ಆರೋಪದಲ್ಲಿ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೂರಿನ ಪ್ರತಿ

ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಹರ್ನಿಯಾ ಶಸ್ತ್ರ ಚಿಕಿತ್ಸೆ ವೇಳೆ ತನ್ನ ಖಾಸಗಿ ಅಂಗಕ್ಕೆ ಗಾಯ ಮಾಡಿದ್ದಾರೆ. ಮುಂದೆ ನನ್ನ ಆರೋಗ್ಯದಲ್ಲಿ ಸಮಸ್ಯೆಯಾದರೆ ಆಸ್ಪತ್ರೆಯ ಸಿಬ್ಬಂದಿಗಳೇ ಕಾರಣ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ ಮೇಲೂ ಆಸ್ಪತ್ರೆ ಮುಖ್ಯಾಧಿಕಾರಿ ಉಡಾಫೆ ಉತ್ತರ ಕೊಟ್ಟಿದ್ದಾರೆಂದು ಯೋಗೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯೋಗೇಂದ್ರ ಎಂಬ ವ್ಯಕ್ತಿ ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಅ.12ರಂದು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಚಿಕಿತ್ಸೆ ಸಂದರ್ಭದಲ್ಲಿ ತನ್ನ ಖಾಸಗಿ ಅಂಗಕ್ಕೆ ಪೈಪ್ ಚುಚ್ಚಿ ತೀವ್ರವಾಗಿ ಗಾಯಗೊಳಿಸಿದ್ದು, ಊತ ಕಾಣಿಸಿಕೊಂಡು ಆರೋಗ್ಯದಲ್ಲಿ ಏರುಪೇರಾಗಿದೆ. ಈ ರೀತಿ ಯಾಕೆ ಮಾಡಿದ್ದೀರಿ ಅಂತಾ ಕೇಳಿದ್ರೆ ಬೆಂಗಳೂರು ಅಥವಾ ಮಂಗಳೂರಿನ ಆಸ್ಪತ್ರೆಗೆ ತೆರಳುವಂತೆ ಸೂಚಿಸಿದ್ದಾರೆಂದು ದೂರಿದ್ದಾರೆ.

Related Articles

Leave a Reply

Your email address will not be published.

Back to top button