Uncategorized

ಪಾರದರ್ಶಕ ರೀತಿಯಲ್ಲಿ ಕಾನ್​ಸ್ಟೇಬಲ್, ಎಸ್​ಐ ಹುದ್ದೆಗಳ ಭರ್ತಿ: ಆರಗ ಜ್ಞಾನೇಂದ್ರ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ ನಡೆಯುತ್ತಿರುವ ನಾಗರಿಕ ಕಾನ್ಸ್ಟೇಬಲ್ಸ್ ಹಾಗೂ ಸಬ್ ಇನ್ಸ್ಪೆಕ್ಟರ್ಗಳ ನೇಮಕಾತಿ ಅತ್ಯಂತ ಪಾರದರ್ಶಕ ಹಾಗೂ ನಿಯಮಾನುಗಳನುಸಾರ ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ರೀತಿಯ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಮನವಿ ಮಾಡಿದ್ದಾರೆ.

ನೇಮಕದಲ್ಲಿ ಕೆಲಸ ಕೊಡಿಸುತ್ತೇನೆಂದು ಕೆಲವರು ನಂಬಿಕೆ ಹುಟ್ಟಿಸಿ, ಅಭ್ಯರ್ಥಿಗಳನ್ನು ವಂಚಿಸುತ್ತಿರುವ ಪ್ರಕರಣಗಳು ವರದಿಯಾಗಿದ್ದು, ಅಭ್ಯರ್ಥಿಗಳು ಹಾಗೂ ಅವರ ಪೋಷಕರು ಅಂತಹ ಯಾವುದೇ ಆಮಿಷಗಳಿಗೆ ಬಲಿಯಾಗಬಾರದು ಎಂದಿದ್ದಾರೆ.

ಪೊಲೀಸ್ ಇಲಾಖೆಯಲ್ಲಿ ಪ್ರಸ್ತುತ 947 ಸಬ್ ಇನ್ಸ್ಪೆಕ್ಟರ್ಸ್ ಹಾಗೂ 4000 ನಾಗರೀಕ ಕಾನ್ಸ್ಟೇಬಲ್ಸ್ ಹುದ್ದೆಗಳ ನೇಮಕ ನಡೆಯುತ್ತಿದ್ದು, ನೇಮಕ ಪ್ರಕ್ರಿಯೆಯಗಳ ಭಾಗವಾಗಿ ನಡೆಯುತ್ತಿರುವ ದೈಹಿಕ ಸಾಮರ್ಥ್ಯ ಹಾಗೂ ಲಿಖಿತ ಪರೀಕ್ಷೆಗಳು, ಅತ್ಯಂತ ಪಾರದರ್ಶಕವಾಗಿದ್ದು ಇದರಲ್ಲಿ ದಾಖಲಾಗುವ ಫಲಿತಾಂಶಗಳೇ ಅಭ್ಯರ್ಥಿಗಳ ಆಯ್ಕೆಯ ಮಾನದಂಡ ಗಳಾಗಿರುತ್ತವೆ.

ಹುದ್ದೆ ಕೊಡಿಸುವುದಾಗಿ ಯಾರಾದರೂ ಆಮಿಷ ಒಡ್ಡಿದರೆ, ಅಭ್ಯರ್ಥಿಗಳು ಅಥವಾ ಅವರ ಪೋಷಕರು, ವಿಷಯವನ್ನು ಪೊಲೀಸರಿಗೆ ತಿಳಿಸಬೇಕು, ಮತ್ತು
ವಂಚನೆಗೆ ಒಳಗಾಗುವುದರಿಂದ ತಪ್ಪಿಸಿಕೊಳ್ಳಬೇಕು, ಎಂದು ಸಚಿವರು ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published.

Back to top button