Uncategorized

ಮೂರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ: ಓರ್ವ ಮಗು ಬಚಾವ್

ಕಲಬುರಗಿ: ಮೂವರು ಮಕ್ಕಳೊಂದಿಗೆ ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಮಾಡ್ಯಾಳ ಗ್ರಾಮದಲ್ಲಿ ನಡೆದಿದೆ.

ತಾಯಿ ಲಕ್ಷ್ಮಿ ಏಳಕೆ (28),‌ ಮಕ್ಕಳಾದ ಗೌರಮ್ಮ (6), ಸಾವಿತ್ರಿ (1) ಮೃತರು ಎಂದು ಗುರುತಿಸಲಾಗಿದೆ. ಇನ್ನೋರ್ವ ಬಾಲಕಿ ಈಶ್ವರಿ (4) ಈಕೆಯನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಮೂರು ಜನ ಹೆಣ್ಣು ಮಕ್ಕಳಿರುವ ಕಾರಣಕ್ಕೆ ಗಂಡ ಹಾಗೂ ಗಂಡನ ಮನೆಯವರ ಕಿರುಕುಳ ಇತ್ತು ಎಂಬ ಆರೋಪ ಕೇಳಿ ಬಂದಿದೆ. ಗ್ರಾಮದ ಹೊರವಲಯದ ಜಮೀನಿನೊಂದರ ಬಾವಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ‌. ಈ ಕುರಿತಾಗಿ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button