Uncategorized
ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ; ನ್ಯಾಯಾಲಯದ ಆದೇಶದಂತೆ ಸರ್ಕಾರ ತೀರ್ಮಾನ: ಆರಗ ಜ್ಞಾನೇಂದ್ರ
ಚಿಕ್ಕಮಗಳೂರು: ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿರುವ ತೀರ್ಪಿನ ಕುರಿತು ಕಾನೂನು ಇಲಾಖೆಯ ಸಲಹೆ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಅವರು ಮಾತನಾಡಿ, ತೀರ್ಪಿನ ಪ್ರತಿಯನ್ನು ಇನ್ನೂ ನೋಡಿಲ್ಲ. ಪೂರ್ಣವಾಗಿ ಓದಿಯೂ ಇಲ್ಲ. ಅಧ್ಯಯನ ಮಾಡಿದ ಬಳಿಕ ನ್ಯಾಯಾಲಯದ ಆದೇಶದಂತೆ ಸರ್ಕಾರ ಖಂಡಿತ ತೀರ್ಮಾನ ಕೈಗೊಳ್ಳಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳುತ್ತದೆ ಹಾಗೂ ಜಿಲ್ಲಾಡಳಿತ ನಿರ್ವಹಣೆಯನ್ನು ಮಾಡುತ್ತದೆ ಎಂದು ಹೇಳಿದರು.