Uncategorized

ಜಿಲ್ಲಾಧಿಕಾರಿ ನಡಿಗೆ ಮತ್ತೆ ಹಳ್ಳಿ ಕಡೆಗೆ

ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರೋನ ಕಾರಣದಿಂದ ಸ್ಥಗಿತವಾಗಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮಕ್ಕೆ ಶನಿವಾರ ಮತ್ತೆ ಚಾಲನೆ ನೀಡಲಾಯಿತು.

ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿ ಒಂದು ಗ್ರಾಮಕ್ಕೆ ಭೇಟಿ ನೀಡಿ ಜನರ‌ ಸಮಸ್ಯೆಗಳನ್ನು ಪರಿಹರಿಸುವ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಕೊರೊನಾ ಕಾರಣದಿಂದ ಸ್ಥಗಿತಗೊಂಡ ಕಾರ್ಯಕ್ರಮಕ್ಕೆ ಮತ್ತೆ ಚಾಲನೆ ನೀಡಲಾಯಿತು.

ನೆಲಮಂಗಲದ ಸೋಂಪುರ ಹೋಬಳಿಯ ಮರಳುಕುಂಟೆ ಗ್ರಾಮಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಜೊತೆ ಉಸ್ತುವಾರಿ ಸಚಿವ ಎಂಟಿಬಿ ನಾಗರಾಜು ಭೇಟಿ ನೀಡಿದರು.

ಶನಿವಾರ ಬೆಳಿಗ್ಗೆ 11 ಗಂಟೆಯಿಂದ ಪ್ರಾರಂಭವಾದ ಕಾರ್ಯಕ್ರಮ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗಿಯಾಗಿ ಇಲಾಖೆಯಿಂದ ಲಭ್ಯವಾಗುವ ಸೌಲಭ್ಯಗಳ ಬಗ್ಗೆ ಗ್ರಾಮಸ್ಥರಿಗೆ ವಿವರಿಸಿದರು.

ಶನಿವಾರ ಗ್ರಾಮದಲ್ಲಿ ಜಿಲ್ಲಾಧಿಕಾರಿ,ವಾಸ್ತವ್ಯಕ್ಕೆ ವಿವಿಧ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು. ಅಹವಾಲು ಸ್ವೀಕಾರ ಮತ್ತು ಗ್ರಾಮದ ಸಮಸ್ಯೆ ಬಗ್ಗೆ ಚರ್ಚೆ, ಕಂದಾಯ ಇಲಾಖೆಯಿಂದ ಪಿಂಚಣಿ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಎಪಿಕ್ ಕಾರ್ಡ್, ಪಹಣಿ ತಿದ್ದುಪಡಿ, ಪೌತಿ ಖಾತೆ, ಆಶ್ರಯ ಯೋಜನೆ ಯಡಿ ಜಮೀನು ಮಂಜೂರಾತಿ, ಸ್ಮಶಾನ ಒತ್ತುವರಿ ಸಮಸ್ಯೆ ಪೋಲಿಸ್ ಇಲಾಖೆಗೆ ಸಂಬಂಧಿಸಿದ ದೂರುಗಳು ಸೇರಿದಂತೆ ಅರ್ಹ ಇಲಾಖೆಗಳಿಂದ ಗ್ರಾಮಸ್ಥರಿಗೆ ಸವಲತ್ತುಗಳ ವಿತರಣೆ ನಡೆಯಿತು.

ದೊಡ್ಡಬಳ್ಳಾಪುರ ತಾಲ್ಲೂಕಿನ ಉದ್ದಿಚಿಕ್ಕನ ಹಳ್ಳಿ, ಹೊಸಕೋಟೆ ತಾಲ್ಲೂಕಿನ, ಸೂಲಿಬೆಲೆಯಲ್ಲಿಯೂ ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮ ಆಯಾ ತಹಶಿಲ್ದಾರರ್ ಗಳ ನೇತೃತ್ವದಲ್ಲಿ ನಡೆಯಿತು.

ದೇವನಹಳ್ಳಿಯ ಕುಂದಾಣ ಹೋಬಳಿಯ ಜಾಲಿಗೆ ಗ್ರಾಮದಲ್ಲಿ ದೇವನಹಳ್ಳಿ ತಹಶಿಲ್ದಾರ್ ಅನಿಲ್ ಕುಮಾರ್ ಅರೋಳಿಕರ್ ಅವರು ಉದ್ಘಾಟಿಸಿದರು.

ಕುಂದಾಣ ಹೋಬಳಿಯ ಜಾಲಿಗೆ ಗ್ರಾಮದ ಜಾಲಿಗೆ ಪಂಚಾಯಿತಿ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಡ ಗೀತೆಯನ್ನು ತಪ್ಪಾಗಿ ಹಾಡಲಾಯಿತು, ರೈತಗೀತೆ ಕೂಡ ಅರ್ಧಕ್ಕೆ ಮೊಟಕು ಗೊಳಿಸಿದ್ದು ಹಾಗೂ ಸರ್ಕಾರಿ ಕಾರ್ಯಕ್ರಮಕ್ಕೆ ತಡವಾಗಿ ಬಂದ ದೇವನಹಳ್ಳಿ ಶಾಸಕರು ಸನ್ಮಾನ ಸ್ವೀಕರಿಸಿದ್ದು ಹಲವರ ಆಕ್ರೋಶಕ್ಕೂ ಕಾರಣವಾಯಿತು.

Related Articles

Leave a Reply

Your email address will not be published.

Back to top button