Uncategorized
ಬಾಗಲಕೋಟೆ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ-ಖರೀದಿ ಬಲು ಜೋರು
ಬಾಗಲಕೋಟೆ: ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಪೂಜಾ ಸಾಮಾಗ್ರಿ ಖರೀದಿಯಲ್ಲಿ ಜನ ಮುಗಿಬಿದ್ದಾರೆ. ಇದರಿಂದ ಮಾರುಕಟ್ಟೆಯಲ್ಲಿ ಜನ ಜಂಗುಳಿಯಿಂದ ತುಂಬು ತುಳುಕುತ್ತಿವೆ.
ಬಾಗಲಕೋಟೆ ಜಿಲ್ಲೆಯಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ.ಮಾರುಕಟ್ಟೆಯಲ್ಲಿ ಹೂ ಹಣ್ಣು, ಬಾಳೆ ದಿಂಡು, ಕಬ್ಬು, ಪಟಾಕಿ ಸೇರಿದಂತೆ ಲಕ್ಷ್ಮೀ ಪೂಜೆಗೆ ಬೇಕಾಗುವ ಸಾಮಾಗ್ರಿ ಖರೀದಿಯಲ್ಲಿ ಮಹಿಳೆಯರು ಜನರು ಮುಗಿಬಿದ್ದಿದ್ದರು. ಹೂವು ಹಣ್ಣು ಬೆಲೆ ದುಬಾರಿಯಾಗಿದೆ. ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಇರಲಿಲ್ಲ.
ಈ ಬಾರಿ ಕೋವಿಡ್ ಕಡಿಮೆಯಾದ ಹಿನ್ನೆಲೆಯಲ್ಲಿ ಯಾವುದೇ ಭಯವಿಲ್ಲದೆ ಜನರು ಖರೀದಿಯಲ್ಲಿ ತೊಡಗಿದ್ದಾರೆ. ಬಾಗಲಕೋಟೆ, ಬಾದಾಮಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಾರುಕಟ್ಟೆಗಳು ಜನಜಂಗುಳಿಯಿಂದ ಕೂಡಿದ್ದವು.