Uncategorized
ಪ್ರವಾಸಿ ತಾಣ ಎತ್ತಿನ ಭುಜದ ಸುತ್ತ ಕಾಡಾನೆಗಳ ಬೀಡು
ಚಿಕ್ಕಮಗಳೂರು: ಪ್ರವಾಸಿ ತಾಣ ಎತ್ತಿನಭುಜ ಸುತ್ತಮುತ್ತ ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಇಲ್ಲಿಗೆ ಭೇಟಿ ನೀಡುವ ಪ್ರವಾಸಿಗರು ಇನ್ನುಮುಂದೆ ಎಚ್ಚರಿಕೆಯಿಂದ ಹೆಜ್ಜೆಯಿಡಬೇಕಾಗಿದೆ.
ಈಗಾಗಲೇ ಎತ್ತಿನಭುಜಕ್ಕೆ ಭೇಟಿ ನೀಡಿರುವ ಪ್ರವಾಸಿಗರಿಗೆ ಕಾಡಾನೆಗಳ ದರ್ಶನವಾಗಿದೆ. ಇದರಿಂದ ಸ್ಥಳೀಯರಿಗೂ ಆತಂಕಗೊಂಡಿದ್ದಾರೆ. ಆರೇಳು ಕಾಡಾನೆಗಳು ಹಿಂಡಾಗಿ ಓಡಾಡುತ್ತಿದ್ದು, ಸುತ್ತಮುತ್ತಲ ಗ್ರಾಮದ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟವಾಗುತ್ತಿವೆ.
ಕಾಡಾನೆಗಳನ್ನು ಸ್ಥಳಾಂತರಿಸಿ, ಜನವಸತಿ ಪ್ರದೇಶಕ್ಕೆ ಕಾಲಿಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಎಷ್ಟೇ ಮನವಿ ಮಾಡಿದರೂ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.