Uncategorized

ಪ್ರಧಾನಿ ಮೋದಿಯವರು ಪೆಟ್ರೋಲ್, ಡಿಸೇಲ್ ಬೆಲೆ ಕಡಿಮೆ ಮಾಡಿ ಜನತೆಗೆ ದೊಡ್ಡ ಉಡುಗೊರೆ ನೀಡಿದ್ದಾರೆ: ಜಗದೀಶ್ ಶೆಟ್ಟರ್

ಧಾರವಾಡ : ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆಯಿಂದ ಮಧ್ಯಮ ಮತ್ತು ಬಡವರಿಗೂ ಸಾಕಷ್ಟು ತೊಂದರೆಯಾಗಿತ್ತು. ಬೆಲೆ ಏರಿಕೆಯಿಂದ ಇತರೆ ಬೆಲೆಗಳು ಕೂಡಾ ಏರಿಕೆಯಾಗಿದ್ದವು. ಜನರು ಬೆಲೆ ಇಳಿಕೆ ಮಾಡಬೇಕೆಂಬ ಒತ್ತಾಯ ಮಾಡುತ್ತಿದ್ದರು. ಹಾಗಾಗಿ ನಮ್ಮ ಪ್ರಧಾನಿ ನರೇಂದ್ರ ಮೋದಿ ಈಗ ಪೆಟ್ರೋಲ್ ಬೆಲೆಯಲ್ಲಿ 5 ರೂಪಾಯಿ ಹಾಗೂ ಡಿಸೇಲ್ ಬೆಲೆಯಲ್ಲಿ 10 ರೂಪಾಯಿ ಕಡಿಮೆ ಮಾಡಿ ಬಹು ದೊಡ್ಡ ದೀಪವಾಳಿ ಉಡುಗೊರೆಯನ್ನು ಜನರಿಗೆ ನೀಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಕೇಂದ್ರ ಸರ್ಕಾರ ಪೆಟ್ರೋಲ್ ಡಿಸೇಲ್ ಬೆಲೆ ಕಡಿಮೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಾ ಪೆಟ್ರೋಲ್​​​, ಡಿಸೇಲ್ ಬೆಲೆಯಲ್ಲಿ 7 ರೂಮಾಯಿ ಕಡಿಮೆ ಮಾಡಿದ್ದಾರೆ. ಇದರಿಂದಾಗಿ ನಮ್ಮ ಜನತೆಗೆ ದೀಪಾವಳಿಯ ಉಡುಗೊರೆಯನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ನೀಡಿವೆ. ಹಾಗಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಜೊತೆಗೆ ರಾಜ್ಯ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

5 ರೂ ಸೇಸ್ ಕಡಿಮೆ ಮಾಡಿದೆ ಎಂದು ಕಂಡು ಬಂದರು ಸಹ ಇದರಿಂದ ಸರ್ಕಾರಕ್ಕೆ ಲಕ್ಷಾಂತರ ಕೋಟಿ ಹೊಡೆತ ಬೀಳುತ್ತದೆ. ಆದರೆ ಜನರಿಗೆ ಭಾರವಾಗಬಾರದೆಂಬ ದೃಷ್ಟಿಯಿಂದ ಸೇಸ್ ನ್ನು ಕಡಿಮೆ ಮಾಡಿದ್ದೇವೆ. ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಈ ಹಿಂದೆಯೇ ತಿಳಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್, ಡಿಸೇಲ್ ಮೇಲಿನ ಸೇಸ್ ಕಡಿಮೆ ಮಾಡಿದ ಬೆನ್ನಲ್ಲೇ ರಾಜ್ಯದಲ್ಲಿ ಪೆಟ್ರೋಲ್ ಮೇಲೆ 7, ಡಿಸೇಲ್ ಮೇಲೆ 7 ರೂ ಕಡಿಮೆ ಮಾಡಿ ನಾಗರಿಕರಿಗೆ ಅನುಕೂಲ ಮಾಡಿ ಕೊಡಲಾಗಿದೆ ಎಂದು ತಿಳಿಸಿದರು.

ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರಕ್ಕೆ ಶುಭ ಹಾರೈಸಿದ ಶೆಟ್ಟರ್:

ರಾಜ್ಯದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ನೂರು ದಿನ ಈಗ ಪೂರೈಸಿದ್ದು, ಅವರ ಅಡಳಿತ ಉತ್ತಮವಾಗಿ ನಡೆಯುತ್ತಿದೆ. ಹಾಗಾಗಿ ಬೊಮ್ಮಾಯಿ ಅವರ ಆಡಳಿತವನ್ನು ನಾನು ಕೂಡಾ ಸ್ವಾಗತ ಮಾಡುತ್ತೇನೆ, ಜೊತೆಗೆ ಅವರ ಆಡಳಿತ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸುತ್ತೇನೆ. ನಾಯಕತ್ವ ಬದಲಾವಣೆ ಆದ ಸಂದರ್ಭದಲ್ಲಿ ಕೆಲವು ಬದಲಾವಣೆಗಳು ಬರುವುದು ಸಹಜವಾಗಿದೆ. ಬಹಳಷ್ಟು ನಾಯಕತ್ವ ಬದಲಾವಣೆ ಮಾತುಗಳ ನಡುವೆ ಬಸವರಾಜ ಬೊಮ್ಮಾಯಿ ಅವರು ನಾಯಕತ್ವದಲ್ಲಿ ಸರಳವಾಗಿ, ಸಾಂಗವಾಗಿ ಆಡಳಿತ ನಡೆಯುತ್ತಿದೆ. ಆ ಹಿನ್ನೆಲೆಯಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಚೆನ್ನಾಗಿ ನಡೆಯಲಿ ಎಂದರು.

ಸಿದ್ದರಾಮಯ್ಯನವರ ಊಹಾಪೋಹ ಆರೋಪ ಸರಿಯಲ್ಲ:

ಬಿಟ್ ಕಾಯಿನ್ ವಿಚಾರವಾಗಿ ಕಾಂಗ್ರೆಸ್ ನ್ಯಾಯಾಂಗ ತನಿಖೆ ಆದೇಶಕ್ಕೆ ಒತ್ತಾಯದ ವಿಚಾರವಾಗಿ ಮಾತನಾಡಿ, ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ಈಗಾಗಲೇ ಇಡೀ ಅಥವಾ ಸಿಬಿಐಗೆ ಕೊಡುವ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ನೀಡಿದೆ. ಸುಮ್ಮನೆ ಊಹಾಪೋಹಗಳ ಮೇಲೆ ಸಿದ್ದರಾಮಯ್ಯ ಆರೋಪ ಸರಿಯಲ್ಲ. ಸಿದ್ದರಾಮಯ್ಯನವರು ವಿಪಕ್ಷ ಸ್ಥಾನದಲ್ಲಿದ್ದಾರೆ, ವಿಚಾರ ಮಾಡಿ ಮಾತನಾಡಬೇಕು. ಒಂದು ವೇಳೆ ಅವರ ಏನನ್ನಾದರೂ ಸಾಕ್ಷ್ಯಗಳು ಇದ್ದರೆ ಬಿಡುಗಡೆ ಮಾಡಲಿ ಎಂದು ಒತ್ತಾಯ ಮಾಡಿದರು. ‌

Related Articles

Leave a Reply

Your email address will not be published.

Back to top button