Uncategorized
ಸಂಚಾರ ಮುಕ್ತಗೊಳಿಸಿದ ಭಟ್ಟಳ ಮಾಜಿ ಶಾಸಕ ಮಂಕಾಳ ವೈದ್ಯ
ಕಾರವಾರ : ಪ್ರತಿಭಾ ಪುರಸ್ಕಾರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ವಾಹನ ದಟ್ಟಣೆಯಿಂದ ಸಮಸ್ಯೆ ಆಗಿದ್ದನ್ನು ಗಮನಿಸಿದ ಮಾಜಿ ಶಾಸಕ ಮಂಕಾಳ ವೈದ್ಯ ಅವರು ಸಂಚಾರ ಮುಕ್ತಗೊಳಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೇಕೋಡಿ ರಸ್ತೆಯಲ್ಲಿ ನಡೆದಿದೆ.
ಭಟ್ಕಳ ತಾಲೂಕಿನ ಪ್ರತಿಭಾವಂತ ವಿದ್ಯಾರ್ಥಿಗಳಿಗಾಗಿ ಅಳ್ವೇಕೋಡಿಯಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಟ್ರಾಫಿಕ್ ಸಮಸ್ಯೆಯಿಂದ ಸಮಾರಂಭಕ್ಕೆ ತೆರಳುತ್ತಿದ್ದ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿತ್ತು.ಇದನ್ನು ಗಮನಿಸಿದ ಮಾಜಿ ಶಾಸಕ ಮಂಕಾಳ ವೈದ್ಯ ಅವರು ವಿದ್ಯಾರ್ಥಿಗಳಿಗೆ ಸಮಯಕ್ಕೆ ಸರಿಯಾಗಿ ಸ್ಪಂದಿಸಿ ಸಹಾಯ ಮಾಡಿದರು.
ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು, ಸಾರ್ವಜನಿಕರು ಮಾಜಿ ಶಾಸಕರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.