ಭಾರೀ ಮಳೆ; ದೇವನಹಳ್ಳಿ, ದೊಡ್ಡಬಳ್ಳಾಪುರದಲ್ಲಿ ಜನಜೀವನ ಅಸ್ತವ್ಯಸ್ತ
ದೇವನಹಳ್ಳಿ : ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಸೋಮವಾರ ಸಂಜೆಯಿಂದ ರಾತ್ರಿವರೆಗೂ ಧಾರಾಕಾರ ಮಳೆ ಸುರಿದು ರಸ್ತೆಗಳಲ್ಲಿ ನೀರು ಹರಿದಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.
ದೇವನಹಳ್ಳಿಯಲ್ಲಿ ಮನೆಗಳು ಮತ್ತು ಅಂಗಡಿಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಯಿತು. ದೇವನಹಳ್ಳಿಯ ಬೈಪಾಸ್ ಸರ್ಕಲ್ ನಲ್ಲಿ ಬಾರಿ ಮಳೆಗೆ ರಸ್ತೆಯಲ್ಲಿ ನೀರು ತುಂಬಿದ್ದರಿಂದ ವಾಹನ ಸವಾರರು ನೀರಿನಲ್ಲಿ ವಾಹನಗಳನ್ನು ಚಲಾಯಿಸಿ ಕಾರುಗಳು ಸ್ಕೂಟರ್ ಗಳು ಆಫ್ ಆಗಿ ನೀರಿನಲ್ಲಿ ನಿಂತಿದ್ದ ದೃಶ್ಯ ಕಂಡುಬಂತು. ಏರ್ಪೋರ್ಟ್ ರೋಡ್ನಲ್ಲಿಯೂ ಸುಮಾರು 20ಕ್ಕೂ ಹೆಚ್ಚು ಕಾರುಗಳು ಇಂಜಿನ್ ಆಪ್ ಆಗಿ ರಸ್ತೆಯಲ್ಲೇ ನಿಂತಿದ್ದವು. ಸೂಲಿಬೆಲೆ ರಸ್ತೆಯಲ್ಲಿ ಧಾರಾಕಾರವಾಗಿ ಸುರಿದ ಮಳೆಗೆ ಮಣ್ಣು ಕುಸಿದು ಕ್ಯಾಂಟರ್ ಪಲ್ಟಿಯಾಗಿತ್ತು.
ವಿಮಾನ ನಿಲ್ದಾಣ ಈಗ ಸಹಜ ಸ್ಥಿತಿಗೆ ಮರಳಿದ್ದು. ರಸ್ತೆಯಲ್ಲಿ ನಿಂತಿದ್ದ ಭಾರಿ ಪ್ರಮಾಣದ ನೀರು ಕಡಿಮೆಯಾಗಿದೆ. ರಾತ್ರಿ ವಿಮಾನ ನಿಲ್ದಾಣ ಸಿಬ್ಬಂದಿ ನೀರು ಹರಿದು ಹೋಗಲು ಕಾಲುವೆ ಮಾಡಿ ನೀರು ಖಾಲಿ ಮಾಡಿದ್ದಾರೆ. ಇದೀಗ ವಾಹನ ಸವಾರರು ಸರಾಗವಾಗಿ ನಿಲ್ದಾಣಕ್ಕೆ ತೆರಳಬಹುದು.
ಬೆಂಗಳೂರು ಗ್ರಾಮಾಂತರ ಭಾಗದ ದೊಡ್ಡಬಳ್ಳಾಪುರ, ದೇವನಹಳ್ಳಿ ಸೇರಿದಂತೆ ಹಲವು ಭಾಗಗಳಲ್ಲಿ ಶನಿವಾರ ಬೆಳಿಗ್ಗೆಯಿಂದಲೇ ಸುರಿದ ಮಳೆಗೆ
ಅರ್ಕಾವತಿನದಿ, ದಕ್ಷಿಣ ಪೀನಾಕಿನಿ ನದಿ, ಬಂಡಿಹಳ್ಳ ತುಂಬಿ ಹರಿಯುತ್ತಿದ್ದು, ಎರಡು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯಲ್ಲಿ ಕೆರೆ, ಕಟ್ಟೆ, ಜಲಾಶಯಗಳು ತುಂಬಿವೆ.